HomeKarnatakaBIG NEWS: ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 2.73 ಕೋಟಿ ಅಕ್ರಮ ಹಣ ಜಪ್ತಿ

BIG NEWS: ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 2.73 ಕೋಟಿ ಅಕ್ರಮ ಹಣ ಜಪ್ತಿ

ಬೆಳಗಾವಿ: ಮಹಾರಷ್ಟ್ರದ ಸಾಂಗ್ಲಿಯಿಂದ ಹುಬ್ಬಳ್ಳಿಗೆ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 2.73 ಕೋಟಿ ಹಣವನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಇನ್ಸ್ ಪೆಕ್ಟರ್ ನಂದೀಶ್ವರ್ ನೇತೃತ್ವದ ತಂಡ ಸಾಂಗ್ಲಿಯಿಂದ ಹುಬ್ಬಳ್ಳಿಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವನು ತಡೆದು ಪರಿಶೀಲನೆ ನಡೆಸಿದಾಗ ಸೂಕ್ತ ದಾಖಲೆಗಳಿಲ್ಲದೇ ಅಕ್ರಮವಾಗಿ ಹಣ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಈ ವೇಳೆ ಗೂಡ್ಸ್ ವಾಹನದಲ್ಲಿದ್ದ 2,73,27,500 ರೂಪಾಯಿ ನಗದು ಹಣವನ್ನು ಜಪ್ತಿ ಮಾಡಲಾಗಿದೆ. ಇದೇ ವೇಳೆ ಮಹಾರಾಷ್ಟ್ರದ ಸಚಿನ್ ಮೇನಕುದಳೆ ಹಾಗೂ ಮಾರುತಿ ಮಾರಗುಡೆ ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೂಡ್ಸ್ ವಾಹನವನ್ನು ಜಪ್ತಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular