HomeKarnatakaರಾಜ್ಯದಲ್ಲಿ 2.76 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ವಿಧಾನಸಭೆಯಲ್ಲಿ ಸಿಎಂ ಮಾಹಿತಿ

ರಾಜ್ಯದಲ್ಲಿ 2.76 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ವಿಧಾನಸಭೆಯಲ್ಲಿ ಸಿಎಂ ಮಾಹಿತಿ

ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಗಳವಾರ ಮಾಹಿತಿ ನೀಡಿದ್ದಾರೆ. ಒಟ್ಟು 7,80,748 ಮಂಜೂರಾದ ಹುದ್ದೆಗಳ ಪೈಕಿ 5,04,362 ಹುದ್ದೆಗಳು ಮಾತ್ರ ಭರ್ತಿಯಾಗಿವೆ ಎಂದು ಅವರು ತಿಳಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಗರಿಷ್ಠ 70,727 ಹುದ್ದೆಗಳು ಖಾಲಿ ಇವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 26,168, ಉನ್ನತ ಶಿಕ್ಷಣ ಇಲಾಖೆಯಲ್ಲಿ 13,227, ಕಂದಾಯ ಇಲಾಖೆಯಲ್ಲಿ 11,145, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 10,898, ಪಶುಸಂಗೋಪನಾ ಇಲಾಖೆಯಲ್ಲಿ 10,755, ಸಮಾಜ ಕಲ್ಯಾಣ ಇಲಾಖೆಯಲ್ಲಿ 9,980, ಆರ್ಥಿಕ ಇಲಾಖೆಯಲ್ಲಿ 9,536 ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 8,334 ಹುದ್ದೆಗಳು ಖಾಲಿ ಇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕ ರವಿಕುಮಾರಗೌಡ (ಗಣಿಗ) ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಮುಖ್ಯಮಂತ್ರಿ, ‘ಎ’ ದರ್ಜೆಯ 16,017, ‘ಬಿ’ ದರ್ಜೆಯ 16,734, ‘ಸಿ’ ದರ್ಜೆಯ 1,66,021 ಮತ್ತು ‘ಡಿ’ ದರ್ಜೆಯ 77,614 ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular