HomeKarnatakaBREAKING: ಸಿಇಟಿಗೆ 2.87 ಲಕ್ಷ ಅಭ್ಯರ್ಥಿಗಳ ನೋಂದಣಿ: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

BREAKING: ಸಿಇಟಿಗೆ 2.87 ಲಕ್ಷ ಅಭ್ಯರ್ಥಿಗಳ ನೋಂದಣಿ: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ-2026ಕ್ಕೆ ನೊಂದಣಿ ಹಾಗು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಿದೆ.

ದಿನಾಂಕ 23-04-2026 ಮತ್ತು 24-04-2026 ರಂದು ನಡೆಸಲಾಗುವ ಸಿಇಟಿ-2026ಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-02-2026 ಮತ್ತು ಶುಲ್ಕ ಪಾವತಿಸಲು 18-02-2026 ಎಂದು ಸೂಚಿಸಲಾಗಿದೆ. ಸುಮಾರು 287909 ಅಭ್ಯರ್ಥಿಗಳು ಸಿಇಟಿ-2026ಕ್ಕೆ ನೋಂದಾಯಿಸಿರುತ್ತಾರೆ. ಇಲ್ಲಿಯವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸದೆ ಇರುವ ಹಾಗೂ ಶುಲ್ಕವನ್ನು ಪಾವತಿಸದೆ ಇರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ, ಆನ್‌ಲೈನ್ ಮೂಲಕ ನೋಂದಣಿ ಮಾಡಿ ಅರ್ಜಿ ಸಲ್ಲಿಸಲು 22-02-2026 ರ ರಾತ್ರಿ 11.59 ರವರೆಗೆ ಹಾಗೂ 24-02-2026 ರ ಸಂಜೆ 5.30 ರವರೆಗೆ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಿಸಲಾಗಿರುತ್ತದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.

ವಿಶೇಷ ಸೂಚನೆ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಈಗಾಗಲೇ ಅರ್ಜಿ ಸಲ್ಲಿಸಿರುವವರು ಎಲ್ಲಾ ಮಾಹಿತಿ ಸರಿಯಾಗಿ ತುಂಬಿರುವ ಬಗ್ಗೆ ಪರಿಶೀಲಿಸಿಕೊಳ್ಳಿ, ತಪ್ಪಿದ್ದರೆ ಮತ್ತೊಮ್ಮೆ Login ಆಗಿ ಸರಿಪಡಿಸಿಕೊಳ್ಳಲು ಅವಕಾಶವಿದೆ. ಅಂತಿಮವಾಗಿ Submit ಮಾಡುವ ಅರ್ಜಿಯಲ್ಲಿನ ಮಾಹಿತಿಗಳು ಸರ್ವ‌್ರನಲ್ಲಿ Save ಆಗುತ್ತದೆ”.

ದೂರವಾಣಿ: 080-23 564 583

ಸಹಾಯವಾಣಿ: 080-23 460 460.

ಇ-ಮೇಲ್: [email protected]

ವೆಬ್‌ಸೈಟ್: http://kea.kar.nic.in

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular