HomeIndiaಸೆಂಟ್ರಲ್ ಜೈಲ್ ನಲ್ಲೇ ಇಬ್ಬರು ಗ್ಯಾಂಗ್ ಸ್ಟರ್ ಗಳ ಹತ್ಯೆ

ಸೆಂಟ್ರಲ್ ಜೈಲ್ ನಲ್ಲೇ ಇಬ್ಬರು ಗ್ಯಾಂಗ್ ಸ್ಟರ್ ಗಳ ಹತ್ಯೆ

ಚಂಡೀಗಢ: ಪಂಜಾಬ್‌ನ ತರನ್ ತರನ್ ಜಿಲ್ಲೆಯ ಗೋಯಿಂದ್ವಾಲ್ ಸಾಹಿಬ್ ಸೆಂಟ್ರಲ್ ಜೈಲಿನಲ್ಲಿದ್ದ ಇಬ್ಬರು ಗ್ಯಾಂಗ್ ಸ್ಟರ್ ಗಳನ್ನು ಹತ್ಯೆ ಮಾಡಲಾಗಿದೆ.

ಸೆಂಟ್ರಲ್ ಜೈಲಿನಲ್ಲಿ 2 ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗ್ಯಾಂಗ್ ಸ್ಟರ್ ಗಳಾದ ಮನ್ ದೀಪ್ ಮತ್ತು ಮನಮೋಹನ್ ಅವರನ್ನು ಹತ್ಯೆ ಮಾಡಲಾಗಿದೆ. ಕಳೆದ ವರ್ಷ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಪ್ರಕರಣದಲ್ಲಿ ಭಾಗಿಯಾದವರೊಂದಿಗೆ ಇಬ್ಬರೂ ಸಂಪರ್ಕ ಹೊಂದಿದ್ದರು. ಇತರ ಪ್ರಕರಣಗಳಲ್ಲಿಯೂ ಇವರು ಭಾಗಿಯಾದ ಆರೋಪ ಎದುರಿಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗುರ್ಮೀತ್ ಸಿಂಗ್ ಚೌಹಾಣ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಲ್ಲಿ ಒಬ್ಬ ಕೈದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರೂ ಒಂದೇ ಗುಂಪಿಗೆ ಸೇರಿದವರು ಎಂದು ಚೌಹಾಣ್ ತಿಳಿಸಿದ್ದಾರೆ.

ಸಿಧು ಮೂಸೆವಾಲಾ ಎಂದೇ ಖ್ಯಾತರಾಗಿದ್ದ ಶುಭದೀಪ್ ಸಿಂಗ್ ಸಿಧು ಅವರನ್ನು ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular