HomeKarnatakaಮಂಗಳೂರಲ್ಲಿ ಹವಾಮಾನ ವೈಪರೀತ್ಯದಿಂದ 2 ವಿಮಾನ ಲ್ಯಾಂಡಿಂಗ್ ಗೆ ಸಮಸ್ಯೆ: ವಿಟ್ಲದಲ್ಲಿ ಕಡಿಮೆ ಎತ್ತರದಲ್ಲಿ ಹಾರಾಟ

ಮಂಗಳೂರಲ್ಲಿ ಹವಾಮಾನ ವೈಪರೀತ್ಯದಿಂದ 2 ವಿಮಾನ ಲ್ಯಾಂಡಿಂಗ್ ಗೆ ಸಮಸ್ಯೆ: ವಿಟ್ಲದಲ್ಲಿ ಕಡಿಮೆ ಎತ್ತರದಲ್ಲಿ ಹಾರಾಟ

ಮಂಗಳೂರು: ಮಂಗಳೂರು ಭಾಗದಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದ್ದು, ಎರಡು ವಿಮಾನಗಳು ಲ್ಯಾಂಡಿಂಗ್ ಆಗದೆ ಸಮಸ್ಯೆ ಎದುರಾಗಿದೆ.

ಹವಾಮಾನ ವೈಪರೀತ್ಯದಿಂದ ವಿಮಾನಗಳ ಲ್ಯಾಂಡಿಂಗ್ ಗೆ ಸಮಸ್ಯೆ ಎದುರಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಭಾಗದಲ್ಲಿ ವಿವಿಧ ಕಡೆಯಿಂದ ಬಂದ ಎರಡು ವಿಮಾನಗಳು ಹಾರಾಟ ನಡೆಸಿವೆ.

ಕಡಿಮೆ ಎತ್ತರದಲ್ಲಿ ವಿಮಾನಗಳು ಹಾರಾಟ ನಡೆಸಿದ್ದು, ಜನ ಕುತೂಹಲದಿಂದ ವೀಕ್ಷಿಸಿದ್ದಾರೆ. ಮಿಂಚು ಗುಡುಗು ಸಹಿತ ಭಾರೀ ಮಳೆಗೆ ವಿಮಾನಗಳು ಲ್ಯಾಂಡಿಂಗ್ ಆಗದೆ ತಿರುಗಾಟ ನಡೆಸಿವೆ. ಹವಾಮಾನ ಪರಿಸ್ಥಿತಿ ತಿಳಿಯಾದ ನಂತರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡೂ ವಿಮಾನಗಳ ಲ್ಯಾಂಡಿಂಗ್ ಗೆ ಅವಕಾಶ ಕಲ್ಪಿಸಲಾಗುವುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲೂ ವಿಮಾನ ಲ್ಯಾಂಡಿಂಗ್ ಗೆ ಸಮಸ್ಯೆಯಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular