3 ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ಕನಿಷ್ಠ ಇಬ್ಬರು ಸಾವು: 14 ಮಂದಿಗೆ ಗಾಯ

ಹರಿಯಾಣದ ಕರ್ನಾಲ್ ನಲ್ಲಿ 3 ಅಂತಸ್ತಿನ ಅಕ್ಕಿ ಗಿರಣಿ ಕುಸಿದು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ.

ಸೋಮವಾರ-ಮಂಗಳವಾರ ಮಧ್ಯರಾತ್ರಿ ಕರ್ನಾಲ್‌ನ ತಾರೋರಿಯಲ್ಲಿರುವ ಮೂರು ಅಂತಸ್ತಿನ ಮಿಲ್‌ನಲ್ಲಿ ಈ ಘಟನೆ ನಡೆದಿದೆ. ಶಿವಶಕ್ತಿ ರೈಸ್ ಮಿಲ್‌ನಲ್ಲಿ ಮಲಗಿದ್ದ ಕೆಲ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಅನಾಹುತದ ನಂತರ ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಇದುವರೆಗೆ 100 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.

ಕರ್ನಾಲ್‌ನಲ್ಲಿ ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ಬಿದ್ದ ನಂತರ ಹಲವಾರು ರೈಸ್ ಮಿಲ್ ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ. ಕಾರ್ಮಿಕರು ಕಟ್ಟಡದೊಳಗೆ ಮಲಗುತ್ತಿದ್ದರು. ಅಗ್ನಿಶಾಮಕ ದಳ, ಪೊಲೀಸರು ಮತ್ತು ಆಂಬ್ಯುಲೆನ್ಸ್ ಸ್ಥಳಕ್ಕೆ ತಲುಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

https://twitter.com/ANI/status/1648150002945114112

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read