HomeIndiaShocking: ಉಡುಗೊರೆಯಾಗಿ ಬಂದಿದ್ದ ಮ್ಯೂಸಿಕ್ ಸಿಸ್ಟಂ ಸ್ಫೋಟ; ನವವಿವಾಹಿತ ಸೇರಿದಂತೆ ಇಬ್ಬರ ಸಾವು

Shocking: ಉಡುಗೊರೆಯಾಗಿ ಬಂದಿದ್ದ ಮ್ಯೂಸಿಕ್ ಸಿಸ್ಟಂ ಸ್ಫೋಟ; ನವವಿವಾಹಿತ ಸೇರಿದಂತೆ ಇಬ್ಬರ ಸಾವು

ಮದುವೆ ಉಡುಗೊರೆಯಾಗಿ ಸಿಕ್ಕ ಮ್ಯೂಸಿಕ್ ಸಿಸ್ಟಂನಿಂದ್ಲೇ ನವವಿವಾಹಿತನ ಪ್ರಾಣ ಹಾರಿ ಹೋಗಿದೆ. ಛತ್ತೀಸ್‌ಗಢದ ಕಬೀರ್‌ಧಾಮ್ ಜಿಲ್ಲೆಯಲ್ಲಿ ಮದುವೆಗೆ ಉಡುಗೊರೆಯಾಗಿ ಸ್ವೀಕರಿಸಿದ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ ಸ್ಫೋಟಗೊಂಡಿದ್ದರಿಂದ ನವವಿವಾಹಿತ ಮತ್ತು ಅವರ ಹಿರಿಯ ಸಹೋದರ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಈ ಘಟನೆ ನಡೆದಿದ್ದು ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದ ಪರಿಣಾಮ ಹೋಮ್ ಥಿಯೇಟರ್ ವ್ಯವಸ್ಥೆಯನ್ನು ಇರಿಸಲಾಗಿದ್ದ ಕೋಣೆಯ ಗೋಡೆಗಳು ಮತ್ತು ಮೇಲ್ಛಾವಣಿ ಕುಸಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಾಥಮಿಕ ಮಾಹಿತಿಯ ಪ್ರಕಾರ, 22 ವರ್ಷದ ಹೇಮೇಂದ್ರ ಮೆರಾವಿ ಏಪ್ರಿಲ್ 1 ರಂದು ವಿವಾಹವಾಗಿದ್ದರು. ಸೋಮವಾರ ಅವರು ಮತ್ತು ಕುಟುಂಬದ ಇತರ ಸದಸ್ಯರು ತಮ್ಮ ಮನೆಯ ಕೋಣೆಯೊಳಗೆ ಮದುವೆಯ ಉಡುಗೊರೆಗಳನ್ನು ಬಿಚ್ಚುತ್ತಿದ್ದರು ಎಂದು ಕಬೀರ್ಧಾಮ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮನೀಶಾ ಠಾಕೂರ್ ತಿಳಿಸಿದ್ದಾರೆ.

ಮ್ಯೂಸಿಕ್ ಸಿಸ್ಟಮ್ ವೈರನ್ನು ಎಲೆಕ್ಟ್ರಿಕ್ ಬೋರ್ಡ್‌ಗೆ ಜೋಡಿಸಿ ಮೆರಾವಿ ಹೋಮ್ ಥಿಯೇಟರ್ ಸಿಸ್ಟಮ್ ಅನ್ನು ಆನ್ ಮಾಡಿದಾಗ, ಭಾರಿ ಸ್ಫೋಟ ಸಂಭವಿಸಿದೆ. ಮೇರಾವಿ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಅವರ ಸಹೋದರ ರಾಜ್‌ಕುಮಾರ್ (30) ಮತ್ತು ಒಂದೂವರೆ ವರ್ಷದ ಬಾಲಕ ಸೇರಿದಂತೆ ಇತರ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಕೌರಾದದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಚಿಕಿತ್ಸೆ ವೇಳೆ ಮೆರಾವಿ ಅವರ ಸಹೋದರ ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೇ ವಿಧಿವಿಜ್ಞಾನ ತಜ್ಞರೊಂದಿಗೆ ಪೊಲೀಸ್ ತಂಡ ಸ್ಥಳಕ್ಕೆ ತೆರಳಿ ಪರಿಶೀಲಿಸಿತು. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು.

ಕೊಠಡಿಯನ್ನು ಪರಿಶೀಲಿಸಿದಾಗ ಸ್ಫೋಟಕ್ಕೆ ಕಾರಣವಾಗುವ ಯಾವುದೇ ದಹನಕಾರಿ ವಸ್ತು ಪತ್ತೆಯಾಗಿಲ್ಲ ಎಂದು ರೆಂಗಾಖರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ದುರ್ಗೇಶ್ ರಾವ್ಟೆ ತಿಳಿಸಿದ್ದಾರೆ.

ಮ್ಯೂಸಿಕ್ ಸಿಸ್ಟಂ ಮಾತ್ರ ಕೋಣೆಯಲ್ಲಿ ಸ್ಫೋಟಗೊಂಡಿದ್ದು, ಸ್ಫೋಟಕ್ಕೆ ಕಾರಣ ತನಿಖೆಯ ನಂತರ ತಿಳಿಯಲಿದೆ ಎಂದು ಅವರು ಹೇಳಿದರು.

ಘಟನೆ ನಡೆದ ಪ್ರದೇಶವು ರಾಯ್‌ಪುರದಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಛತ್ತೀಸ್‌ಗಢ-ಮಧ್ಯಪ್ರದೇಶ ಗಡಿಯಲ್ಲಿರುವ ಮಾವೋವಾದಿ ಪೀಡಿತ ಪ್ರದೇಶದಲ್ಲಿ ಬರುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular