ತುಮಕೂರು: ಎರಡು ಕೆ.ಎಸ್.ಆರ್.ಟಿ.ಸಿ.ಬಸ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಎರಡು ಕೆ.ಎಸ್.ಆರ್.ಟಿ.ಸಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಬಸ್ ಚಾಲಕರಿಬ್ಬರ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿದೆ.
15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 
			 
		 
		 
		 
		 Loading ...
 Loading ... 
		 
		 
		