HomeKarnatakaBREAKING NEWS: ಎರಡು KSRTC ಬಸ್ ಗಳ ನಡುವೆ ಅಪಘಾತ; 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

BREAKING NEWS: ಎರಡು KSRTC ಬಸ್ ಗಳ ನಡುವೆ ಅಪಘಾತ; 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ತುಮಕೂರು: ಎರಡು ಕೆ.ಎಸ್.ಆರ್.ಟಿ.ಸಿ.ಬಸ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಕೊರಟಗೆರೆ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಎರಡು ಕೆ.ಎಸ್.ಆರ್.ಟಿ.ಸಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಬಸ್ ಚಾಲಕರಿಬ್ಬರ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿದೆ.

15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular