HomeKarnatakaBIG NEWS: ಎರಡು KSRTC ಬಸ್ ಗಳ ನಡುವೆ ಭೀಕರ ಅಪಘಾತ

BIG NEWS: ಎರಡು KSRTC ಬಸ್ ಗಳ ನಡುವೆ ಭೀಕರ ಅಪಘಾತ

ತುಮಕೂರು: ಓವರ್ ಟೇಕ್ ಮಾಡುವ ಬರದಲ್ಲಿ ಎರಡು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆಯ ಮಾದಾವರದ ಹೆದ್ದಾರಿ ಬಳಿ ನಡೆದಿದೆ.

ಒಂದು ಬಸ್ ಇನ್ನೊಂದು ಬಸ್ ನ್ನು ಓವರ್ ಟೇಕ್ ಮಾಡಲು ಹೋಗಿ ಬಸ್ ಗಳು ಡಿಕ್ಕಿಹೊಡೆದಿದ್ದು, ಅಪಘಾತದ ರಭಸಕ್ಕೆ ಒಂದು ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಹೆದ್ದಾರಿಗೆ ಅಡ್ಡಲಾಗಿ ನಿಂತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎರಡು ಬಸ್ ಗಳ ಅಪಘಾತದಿಂದಾಗಿ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಸ್ಥಳಕ್ಕೆ ಧಾವಿಸಿದ ಪೊಲೀಸರು ಬಸ್ ಗಳನ್ನು ತೆರವುಗೊಳಿಸಿ, ವಾಹನಗಳ ಸಂಚಾರಕ್ಕೆ ಅನುವುಮಾಡಿಕೊಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular