HomeKarnatakaಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇಮಕಾತಿಯಲ್ಲಿ ಶೇ. 2 ರಷ್ಟು ಮೀಸಲಾತಿ:...

ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇಮಕಾತಿಯಲ್ಲಿ ಶೇ. 2 ರಷ್ಟು ಮೀಸಲಾತಿ: ಸಂಪುಟ ನಿರ್ಧಾರ

ಬೆಂಗಳೂರು: ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇಮಕಾತಿಯಲ್ಲಿ ಶೇಕಡ 2 ರಷ್ಟು ಮೀಸಲಾತಿ ನೀಡಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ. ಇದಕ್ಕಾಗಿ ಕರ್ನಾಟಕ ನಾಗರೀಕ ಸೇವಾ ಸಾಮಾನ್ಯ ನೇಮಕಾತಿ ತಿದ್ದುಪಡಿ ನಿಯಮಗಳು 2026 ಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ರಾಜ್ಯ ಸರ್ಕಾರ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2ರಷ್ಟು ಹುದ್ದೆಗಳನ್ನು ಮೀಸಲಿಡಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿತ್ತು. 2024ರ ಡಿಸೆಂಬರ್ ನಲ್ಲಿ ಈ ಆದೇಶಕ್ಕೆ ತಡೆ ನೀಡಲಾಗಿತ್ತು. ವಿಶೇಷ ರಾಜ್ಯ ಪತ್ರದ ಮೂಲಕ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ನಾಗರೀಕ ಸೇವಾ ಸಾಮಾನ್ಯ ನೇಮಕಾತಿ ನಿಯಮಗಳು 1970 ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಆದೇಶದಲ್ಲಿ ಪುನರ್ ಪರಿಶೀಲಿಸಲಿದೆ. ಹೀಗಾಗಿ ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾದ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ಸೂಚನೆ ನೀಡಲಾಗಿತ್ತು.

ಗುರುವಾರ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಕ್ರೀಡಾ ಸಾಧಕರಿಗೆ ಮೀಸಲಾತಿ ನೀಡುವ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ಅಂತಿಮವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಮಂಡಿಸಿದ ಕರ್ನಾಟಕ ನಾಗರಿಕ ಸೇವಾ ಸಾಮಾನ್ಯ ನೇಮಕಾತಿ ತಿದ್ದುಪಡಿ ನಿಯಮಗಳು 2026 ಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular