HomeKarnatakaBREAKING NEWS : ದಾವಣಗೆರೆಯಲ್ಲಿ ಟಿಪ್ಪರ್ ಹರಿದು 2 ವರ್ಷದ ಕಂದಮ್ಮ ಬಲಿ

BREAKING NEWS : ದಾವಣಗೆರೆಯಲ್ಲಿ ಟಿಪ್ಪರ್ ಹರಿದು 2 ವರ್ಷದ ಕಂದಮ್ಮ ಬಲಿ

ದಾವಣಗೆರೆ : ಯಮಧೂತ ಟಿಪ್ಪರ್ ಹರಿದು 2 ವರ್ಷದ ಕಂದಮ್ಮ ಮೃತಪಟ್ಟ ಘಟನೆ ದಾವಣಗೆರೆ ನಗರದ ಕುಂದುವಾಡದಲ್ಲಿ ನಡೆದಿದೆ.

ಮೃತ ಮಗುವನ್ನು 2 ವರ್ಷದ ಚರಸ್ವಿ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಟಿಪ್ಪರ್ ಮಗುವಿನ ಮೇಲೆ ಹರಿದಿದೆ ಎನ್ನಲಾಗಿದೆ. ಅಂಗನವಾಡಿಯಿಂದ ಮಗು ಮನೆಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಹಿನ್ನೆಲೆ ಆಕ್ರೋಶಗೊಂಡ ಬಾಲಕಿಯ ಪೋಷಕರು ಹಾಗೂ ಸ್ಥಳೀಯರು ರಸ್ತೆ ಬಂದ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಟಿಪ್ಪರ್ ಚಾಲಕನನ್ನು ಬಂಧಿಸುವಂತೆ ಪ್ರತಿಭಟನೆ ನಡೆಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟಿಪ್ಪರ್ ಚಾಲಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular