ಆಂಧ್ರಪ್ರದೇಶ : ಕರ್ನೂಲ್ ಖಾಸಗಿ ಬಸ್ ಅಗ್ನಿ ದುರಂತದಲ್ಲಿ 20 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.
ಹೌದು, ತೆಲಂಗಾಣ ಸರ್ಕಾರ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿದೆ. ಅದೇ ರೀತಿ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿದೆ. ಈ ಮೂಲಕ ಮೃತರ ಕುಟುಂಬಕ್ಕೆ ಒಟ್ಟು ತಲಾ 7 ಲಕ್ಷ ಪರಿಹಾರ ಸಿಗಲಿದೆ.
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಶುಕ್ರವಾರ ಬೆಳಗಿನ ಜಾವ 42 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸ್ಲೀಪರ್ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 20 ಜನರು ಸಾವನ್ನಪ್ಪಿದ್ದಾರೆ.

