HomeLatest Newsಬಸ್‌ ಗೆ ಬೆಂಕಿ ತಗುಲಿ 20 ಪ್ರಯಾಣಿಕರು ಸಜೀವ ದಹನ, 16 ಜನರಿಗೆ ಗಾಯ; ಪ್ರಧಾನಿ...

ಬಸ್‌ ಗೆ ಬೆಂಕಿ ತಗುಲಿ 20 ಪ್ರಯಾಣಿಕರು ಸಜೀವ ದಹನ, 16 ಜನರಿಗೆ ಗಾಯ; ಪ್ರಧಾನಿ ಪರಿಹಾರ ಘೋಷಣೆ

ಜೈಸಲ್ಮೇರ್: ರಾಜಸ್ಥಾನದಲ್ಲಿ ಮಂಗಳವಾರ ಮಧ್ಯಾಹ್ನ ಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಠಾತ್ತನೆ ಹೊತ್ತಿ ಉರಿದ ಪರಿಣಾಮ ಇಪ್ಪತ್ತು ಜನರು ಸಜೀವ ದಹನವಾಗಿದ್ದು, 16 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಹತ್ತಿರದ ಸಂಬಂಧಿಕರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

57 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಮಧ್ಯಾಹ್ನ 3 ಗಂಟೆ ಸುಮಾರಿಗೆ ಜೈಸಲ್ಮೇರ್‌ನಿಂದ ಹೊರಟಿತ್ತು. ಜೈಸಲ್ಮೇರ್-ಜೋಧ್‌ಪುರ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ವಾಹನದ ಹಿಂಭಾಗದಿಂದ ಹೊಗೆ ಹೊರಹೊಮ್ಮಲು ಪ್ರಾರಂಭಿಸಿ ಬೆಂಕಿ ಇಡೀ ಬಸ್ ಗೆ ವ್ಯಾಪಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular