ಚಂಡಿಘಡ: ಹರಿಯಾಣ ಪೊಲೀಸ್ ನೇಮಕಾತಿಯಲ್ಲಿ ಅಗ್ನಿವೀರರಿಗೆ ಶೇಕಡ 20ರಷ್ಟು ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಘೋಷಿಸಿದ್ದಾರೆ.
2024 ರ ಜುಲೈನಲ್ಲಿ ವಿಧಾನಸಭೆ ಚುನಾವಣೆಗೆ ಮೊದಲೇ ಬಿಜೆಪಿ ಸರ್ಕಾರ ಅಗ್ನಿವೀರರಿಗೆ ಪೊಲೀಸ್ ಕಾನ್ಸ್ಟೇಬಲ್, ಫಾರೆಸ್ಟ್ ಗಾರ್ಡ್ ಮತ್ತು ಜೈಲು ವಾರ್ಡನ್ ನೇಮಕಾತಿಯಲ್ಲಿ ಶೇಕಡ 10ರಷ್ಟು ಮೀಸಲಾತಿ ನೀಡುವುದಾಗಿ ತಿಳಿಸಿತ್ತು.
ಭಾನುವಾರ ಪರಿಶೀಲನಾ ಸಭೆ ನಡೆಸಿದ ನಯಾಬ್ ಸಿಂಗ್ ಸೈನಿ, ಮೀಸಲಾತಿ ಹೆಚ್ಚಳ ತೀರ್ಮಾನ ಪ್ರಕಟಿಸಿದ್ದಾರೆ. ಅಗ್ನಿವೀರರು ಸೇನೆಯಲ್ಲಿ ತಮ್ಮ ಸೇವಾವಧಿ ಮುಗಿಸಿದ ನಂತರ ಅವರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮೂಲಕ ಅವರ ಭವಿಷ್ಯಕ್ಕೆ ಭದ್ರತೆ ಒದಗಿಸಲಾಗಿದೆ. ದೇಶದಲ್ಲೇ ಈ ನಿರ್ಧಾರ ತೆಗೆದುಕೊಂಡ ಮೊದಲ ರಾಜ್ಯ ನಮ್ಮದು ಎಂದು ಹೇಳಿದ್ದಾರೆ.