HomeIndiaಆನ್ಲೈನ್ ನಲ್ಲಿ ತರಿಸಿಕೊಂಡ ಬಿರಿಯಾನಿ ತಿಂದು ವಿದ್ಯಾರ್ಥಿನಿ ಸಾವು: ತನಿಖೆಗೆ ಆದೇಶಿಸಿದ ಸಚಿವೆ ವೀಣಾ ಜಾರ್ಜ್

ಆನ್ಲೈನ್ ನಲ್ಲಿ ತರಿಸಿಕೊಂಡ ಬಿರಿಯಾನಿ ತಿಂದು ವಿದ್ಯಾರ್ಥಿನಿ ಸಾವು: ತನಿಖೆಗೆ ಆದೇಶಿಸಿದ ಸಚಿವೆ ವೀಣಾ ಜಾರ್ಜ್

ಕಾಸರಗೋಡು: ಕಲುಷಿತ ಆಹಾರ ಸೇವನೆಯಿಂದ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ಆರೋಪಿಸಲಾಗಿದೆ. ಕೇರಳದ ಕಾಸರಗೋಡಿನ ಪೆರುಂಬೋಳದಲ್ಲಿ ಘಟನೆ ನಡೆದಿದೆ.

ಅಂಜುಶ್ರೀ ಪಾರ್ವತಿ(20) ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಬಿರಿಯಾನಿ ಸೇವಿಸಿದ ಬಳಿಕ ಅಂಜುಶ್ರೀ ಪಾರ್ವತಿ ಅಸ್ವಸ್ಥಗೊಂಡಿದ್ದರು. ಆನ್ಲೈನ್ ನಲ್ಲಿ ಕಾಸರಗೋಡಿನ ಹೋಟೆಲ್ ಒಂದರಿಂದ ಅವರು ಬಿರಿಯಾನಿ ತರಿಸಿಕೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಸರಗೋಡಿನ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಅಂಜುಶ್ರೀ ಪಾರ್ವತಿ ಮೃತಪಟ್ಟಿದ್ದಾರೆ. ಸಾವಿನ ಬಗ್ಗೆ ಪೋಷಕರು ದೂರು ನೀಡಿದ ಹಿನ್ನೆಲೆಯಲ್ಲಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆಗೆ ಆದೇಶಿಸಿದ್ದಾರೆ. ಕೇರಳದ ಆಹಾರ ಸುರಕ್ಷತಾ ಆಯುಕ್ತರಿಗೆ ಈ ಕುರಿತಾಗಿ ವರದಿ ಸಲ್ಲಿಸಲು ಅವರು ಸೂಚನೆ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಆಹಾರ ಸುರಕ್ಷತಾ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ. ಘಟನೆ ಮತ್ತು ಬಾಲಕಿಗೆ ನೀಡಿದ ಚಿಕಿತ್ಸೆಯ ಬಗ್ಗೆಯೂ ಡಿಎಂಒ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವೀಣಾ ಜಾರ್ಜ್ ಪತ್ತನಂತಿಟ್ಟದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಪೊಲೀಸರು ಕೂಡ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular