HomeBusinessಗಮನಿಸಿ: 2000 ರೂ. ನೋಟು ಬದಲಾವಣೆಗೆ ಇನ್ನೂ ಇದೆ ಅವಕಾಶ

ಗಮನಿಸಿ: 2000 ರೂ. ನೋಟು ಬದಲಾವಣೆಗೆ ಇನ್ನೂ ಇದೆ ಅವಕಾಶ

ನವದೆಹಲಿ: 2000 ರೂ. ಮುಖಬೆಲೆಯ ನೋಟುಗಳ ಬದಲಾವಣೆಗೆ ಅಥವಾ ಠೇವಣಿಗೆ ಬ್ಯಾಂಕುಗಳಲ್ಲಿ ಅವಕಾಶ ಇಲ್ಲ. ಒಂದು ವೇಳೆ ನಿಮ್ಮ ಬಳಿ ಅಂತಹ 2000 ರೂ. ನೋಟುಗಳಿದ್ದಲ್ಲಿ ಆರ್‌ಬಿಐ ಶಾಖೆಗಳಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶ ಇದೆ.

ದೇಶದೆಲ್ಲೆಡೆ ಆರ್‌ಬಿಐನ ಒಟ್ಟು 19 ಪ್ರಾದೇಶಿಕ ಕಚೇರಿಗಳಿವೆ. ಈ ಶಾಖೆಗಳಲ್ಲಿ ಎರಡು ಸಾವಿರ ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಳ್ಳಬಹುದು ಅಥವಾ ಠೇವಣಿ ಮಾಡಬಹುದಾಗಿದೆ. ಆರ್‌ಬಿಐನ ಎಲ್ಲಾ ಶಾಖೆಗಳಲ್ಲಿ 2000 ರೂ. ನೋಟು ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2016ರಲ್ಲಿ 1000 ರೂ. ಮತ್ತು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಲಾಗಿತ್ತು. ಅವುಗಳ ಬದಲಿಗೆ 2000 ರೂ. ಮತ್ತು 500 ರೂಪಾಯಿ ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡಲಾಗಿತ್ತು. ಈಗ 2000 ರೂ. ನೋಟುಗಳನ್ನು ಹಿಂಪಡೆಯಲಾಗಿದೆ. ಬ್ಯಾಂಕುಗಳಲ್ಲಿ ಹಳೆಯ ನೋಟುಗಳ ವಿನಿಮಯ ಅಥವಾ ಠೇವಣಿಗೆ ಅವಧಿ ಮುಕ್ತಾಯವಾಗಿದೆ. ಆರ್.ಬಿ.ಐ. ಶಾಖೆಗಳಲ್ಲಿ ಈ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular