2024 ರಲ್ಲೂ ನರೇಂದ್ರ ಮೋದಿಯವರೇ ಪ್ರಧಾನಿ; ಅಮಿತ್ ಶಾ ಮಹತ್ವದ ಹೇಳಿಕೆ

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ಎರಡು ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರು ಮತ್ತೊಂದು ಅವಧಿಗೂ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಲಿದ್ದಾರಾ ಎಂಬ ಪ್ರಶ್ನೆ ಕೇಳಿ ಬರುತ್ತಿತ್ತು.

ಇದೀಗ ಈ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಹೇಳಿಕೆ ನೀಡಿದ್ದು, 2024 ರ ಲೋಕಸಭಾ ಚುನಾವಣೆಯ ಬಳಿಕ ನರೇಂದ್ರ ಮೋದಿ ಅವರೇ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಗುಜರಾತಿನ ಗಾಂಧಿನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶದ ಮೂಲಕ ಈ ಕುರಿತ ಸ್ಪಷ್ಟ ಸಂದೇಶ ರವಾನೆಯಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read