ಬೆಂಗಳೂರು: 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವದ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಡಿಕೆ ಶಿವಕುಮಾರ್ ಅವರು 2028ರ ಚುನಾವಣೆಯ ವೇಳೆಯೂ ಮುಖ್ಯಮಂತ್ರಿ ಸ್ಥಾನದಲ್ಲೇ ಮುಂದುವರಿಯಲಿದ್ದಾರೆಯೇ ಎಂಬ ಪ್ರಶ್ನೆಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮಾತನಾಡಿರುವ ಅವರು, “ ನನಗೆ ಇನ್ನೂ ವಯಸ್ಸಿದೆ, ನಾನು ಕಾಯುತ್ತೇನೆ. 2028 ಕ್ಕೂ ಡಿ.ಕೆ ಶಿವಕುಮಾರ್ ಅವರೇ ಸಿಎಂ ಆಗಲಿ ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ 2028ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಸಂಘಟನೆಯನ್ನು ಬಲಪಡಿಸುವತ್ತ ಗಮನ ಹರಿಸುತ್ತಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ 2028ರ ಚುನಾವಣೆಯನ್ನು ಎದುರಿಸುವ ಕುರಿತು ಈಗಾಗಲೇ ಮಾತನಾಡಿದ್ದಾರೆ.
ಆದರೆ 2028ರಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಕಾಂಗ್ರೆಸ್ ಪಕ್ಷದಿಂದ ಅಂತಿಮ ಅಧಿಕೃತ ಘೋಷಣೆ ಇನ್ನೂ ಹೊರಬಿದ್ದಿಲ್ಲ. ಹೀಗಾಗಿ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಸದ್ಯಕ್ಕೆ ರಾಜಕೀಯ ಚರ್ಚೆಯ ವಿಷಯವಾಗಿದೆ.
ಸಿದ್ದರಾಮಯ್ಯ ನಮ್ಮ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್’: ಸತೀಶ್ ಜಾರಕಿಹೊಳಿ
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಹಾಗೂ ಮುಖ್ಯಮಂತ್ರಿ ಸ್ಥಾನದ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿದ್ದರಾಮಯ್ಯ ಇನ್ನೂ ನಮ್ಮ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಹಾಗೂ ತಮ್ಮ ನಡುವೆ ಯಾವುದೇ ಗೊಂದಲ ಅಥವಾ ಭಿನ್ನಾಭಿಪ್ರಾಯ ಇಲ್ಲ ಎಂದು ಸತೀಶ್ ಜಾರಕಿಹೊಳಿ ಈ ಹಿಂದೆಯೂ ಸ್ಪಷ್ಟಪಡಿಸಿದ್ದರು. ತಮ್ಮಿಬ್ಬರ ಸಂಬಂಧ ಸುಮಾರು 30 ವರ್ಷಗಳದ್ದು ಎಂದು ಹೇಳಿದ್ದ ಅವರು, ಗೊಂದಲ ಸೃಷ್ಟಿಸಿ ರಾಜಕೀಯ ಲಾಭ ಪಡೆಯಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.
ಇದೀಗ ಸಿದ್ದರಾಮಯ್ಯ ಅವರನ್ನು ‘ಕ್ಯಾಪ್ಟನ್’ ಹಾಗೂ ತಮ್ಮನ್ನು ‘ವೈಸ್ ಕ್ಯಾಪ್ಟನ್’ ಎಂದು ಬಣ್ಣಿಸುವ ಮೂಲಕ ಸತೀಶ್ ಜಾರಕಿಹೊಳಿ ಅವರು ಪಕ್ಷದೊಳಗಿನ ತಮ್ಮ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಈ ನಡುವೆ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಹೇಳಿಕೆ ನೀಡಿದ್ದರೂ, ಸಕ್ರಿಯ ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ ಎಂದು ಅವರ ಪುತ್ರ ಹಾಗೂ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು. ಕಾಂಗ್ರೆಸ್ ಪರವಾಗಿ ಅವರು ಮುಂದೆಯೂ ಸಕ್ರಿಯವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಯತೀಂದ್ರ ಹೇಳಿದ್ದಾರೆ. ಹೀಗಾಗಿ ಸತೀಶ್ ಜಾರಕಿಹೊಳಿ ಅವರ ‘ಕ್ಯಾಪ್ಟನ್–ವೈಸ್ ಕ್ಯಾಪ್ಟನ್’ ಹೇಳಿಕೆ ರಾಜ್ಯ ಕಾಂಗ್ರೆಸ್ನ ನಾಯಕತ್ವದ ಚರ್ಚೆಯ ನಡುವೆ ಗಮನ ಸೆಳೆದಿದೆ.
ಶಿವಮೊಗ್ಗದಲ್ಲಿ ಕಸಬಾ ಹೋಬಳಿ ಮಟ್ಟದ ‘ಪ್ರಜಾಸೇವೆ ಆಂದೋಲನ’ ಸಭೆ
ಶಿವಮೊಗ್ಗ : ರಾಜ್ಯದ ಜನರ ಅಹವಾಲುಗಳನ್ನು ಆಲಿಸಿ, ಅವರ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡುವ ಉದ್ದೇಶದಿಂದ ಶಿವಮೊಗ್ಗ ತಾಲೂಕು ಕಸಬಾ ಹೋಬಳಿ ಮಟ್ಟದ ‘ಪ್ರಜಾಸೇವೆ ಆಂದೋಲನ’ ಸಭೆಯನ್ನು ಆಯೋಜಿಸಲಾಗಿದೆ.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್. ಎನ್. ಚನ್ನಬಸಪ್ಪ ಅವರ ನೇತೃತ್ವದಲ್ಲಿ ಹಾಗೂ ಅಧ್ಯಕ್ಷತೆಯಲ್ಲಿ ಈ ಸಭೆಯು ದಿನಾಂಕ 26.09.2026 ರ ಶನಿವಾರ ಬೆಳಿಗ್ಗೆ 10:00 ಗಂಟೆಗೆ ಶಿವಮೊಗ್ಗದ ಮಹಾನಗರ ಪಾಲಿಕೆ ಆವರಣದಲ್ಲಿ ನಡೆಯಲಿದೆ.
ಆದ್ದರಿಂದ ಸಾರ್ವಜನಿಕರು ಹಾಗೂ ಸಾರ್ವಜನಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಸಲ್ಲಿಸುವುದರ ಜೊತೆಗೆ, ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಪಡೆಯಲು ಅರ್ಜಿ ಸಲ್ಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕಾಗಿ ಶಿವಮೊಗ್ಗ ತಾಲೂಕಿನ ತಹಶೀಲ್ದಾರರು ಕೋರಿದ್ದಾರೆ

