HomeKarnatakaBIG NEWS : ವರುಣಾರ್ಭಟಕ್ಕೆ ರಾಜ್ಯದಲ್ಲಿ 21 ಜನರು ಬಲಿ

BIG NEWS : ವರುಣಾರ್ಭಟಕ್ಕೆ ರಾಜ್ಯದಲ್ಲಿ 21 ಜನರು ಬಲಿ

ಕುಮಟಾ: ರಾಜ್ಯಾದ್ಯಂತ ಮಳೆಯ ಅವಾಂತರದಲ್ಲಿ ಈವರೆಗೆ 21 ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಮಳೆ ಅವಾಂತರದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಈ ವೇಳೆ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಸಚಿವರು, ಮಳೆಯಿಂದಾಗಿ ರಾಜ್ಯದಲ್ಲಿ ಈವರೆಗೆ 21 ಜನ ಮೃತಪಟ್ಟಿದ್ದು, 40 ಜಾನುವಾರುಗಳು ಮೃತಪಟ್ಟಿವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ನಾವೇ ಖುದ್ದಾಗಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದೇವೆ. ರಾಜ್ಯಕ್ಕೆ ಮುಂಗಾರು ಪ್ರವೇಶವಾದರು ಕೆಲ ಜಿಲ್ಲೆಗಳಲ್ಲಿ ಮಳೆ ಕೊರೆತೆಯಿದೆ. ಜುಲೈ ಕೊನೆವಾರದವರೆಗೆ ನೋಡಿಕೊಂಡು ಮೋಡ ಬಿತ್ತನೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular