HomeInternationalಉಕ್ರೇನ್ ಜನವಸತಿ ಪ್ರದೇಶದ ಮೇಲೆ ರಷ್ಯಾ ಕ್ಷಿಪಣಿ ದಾಳಿ: 21 ನಾಗರಿಕರು ಸಾವು

ಉಕ್ರೇನ್ ಜನವಸತಿ ಪ್ರದೇಶದ ಮೇಲೆ ರಷ್ಯಾ ಕ್ಷಿಪಣಿ ದಾಳಿ: 21 ನಾಗರಿಕರು ಸಾವು

ಉಕ್ರೇನ್ ಮೇಲೆ ರಷ್ಯಾ ಸೇನೆ ಕ್ಷಿಪಣಿ ದಾಳಿ ನಡೆಸಿದ್ದು, ಉಕ್ರೇನ್ ನಲ್ಲಿ 21 ನಾಗರಿಕರು ಸಾವನ್ನಪ್ಪಿದ್ದು, 48 ಜನರಿಗೆ ಗಾಯಗಳಾಗಿವೆ.

ಖೇರ್ಖರ್ ಸಣ್ಣ ನಗರದ ವಸತಿ ಪ್ರದೇಶದ ಮೇಲೆ ರಷ್ಯಾ ಸೇನೆ ಕ್ಷಿಪಣಿ ದಾಳಿ ನಡೆಸಿದೆ ಎಂದು ರಷ್ಯಾ ಸೇನೆಯ ವಿರುದ್ಧ ಅಧ್ಯಕ್ಷ ಝೆಲೆನ್ ಸ್ಕಿ ಗಂಭೀರ ಆರೋಪ ಮಾಡಿದ್ದಾರೆ. ದಾಳಿಯಲ್ಲಿ ರೈಲ್ವೆ ನಿಲ್ದಾಣ, ಪೆಟ್ರೋಲ್ ಬಂಕ್, ಕಟ್ಟಡಗಳು, ಹೈಪರ್ಮಾರ್ಕೆಟ್ ಗೆ ಹಾನಿಯಾಗಿದೆ ಎಂದು ಝೆಲೆನ್ ಸ್ಕಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆಯಷ್ಟೇ ಡ್ರೋಣ್ ಮೂಲಕ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹತ್ಯೆಗೆ ಉಕ್ರೇನ್ ಪ್ರಯತ್ನ ನಡೆಸಿದೆ ಎಂದು ರಷ್ಯಾ ಆರೋಪ ಮಾಡಿತ್ತು. ಆದರೆ ಈ ಆರೋಪವನ್ನು ಉಕ್ರೇನ್ ಅಲ್ಲಗಳೆದಿತ್ತು. ಇದರ ಬೆನ್ನಲ್ಲೇ ಉಕ್ರೇನ್ ಮೇಲೆ ರಷ್ಯಾದಿಂದ ಕ್ಷಿಪಣಿ ದಾಳಿ ನಡೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular