HomeKarnatakaBIG NEWS: ಪ್ರೀತಿಸುವಂತೆ ಯುವಕನಿಂದ ಕಿರುಕುಳ; ಮನನೊಂದ ಯುವತಿ ಆತ್ಮಹತ್ಯೆ

BIG NEWS: ಪ್ರೀತಿಸುವಂತೆ ಯುವಕನಿಂದ ಕಿರುಕುಳ; ಮನನೊಂದ ಯುವತಿ ಆತ್ಮಹತ್ಯೆ

ಹಾಸನ: ಯುವಕನೊಬ್ಬ ಪ್ರೀತಿಸುವಂತೆ ಯುವತಿಗೆ ನಿರಂತರವಾಗಿ ಕಿರುಕುಳ ಕೊಟ್ಟು, ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

21 ವರ್ಷದ ಸಂಗೀತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ನಿಡಗೂಡು ಗ್ರಾಮದ ಸಂಗೀತಾ ಬಿ.ಕಾಂ ಮುಗಿಸಿ ಮನೆಯಲ್ಲಿಯೇ ಇದ್ದಳು. ಶಿವು ಎಂಬ ಯುವಕ ತನ್ನನ್ನು ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ.

ಸಂಗೀತಾಳಿಗೆ ಅವಾಚ್ಯವಾಗಿ ನಿಂದಿಸಿ, ತನ್ನನ್ನು ಪ್ರೀತಿಸದಿದ್ದರೆ ಕೊಲೆ ಮಡುವುದಾಗಿ ಬೆದರಿಕೆ ಹಾಕಿದ್ದ. ಯುವಕನ ಕಾಟಕ್ಕೆ ಬೇಸತ್ತ ಸಂಗೀತಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular