HomeKarnatakaಕೊಡಗು ಜಿಲ್ಲೆ ಪ್ರಮುಖ ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ 22 ಕೋಟಿ ರೂ.: ಯದುವೀರ್ ಒಡೆಯರ್

ಕೊಡಗು ಜಿಲ್ಲೆ ಪ್ರಮುಖ ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ 22 ಕೋಟಿ ರೂ.: ಯದುವೀರ್ ಒಡೆಯರ್

ಮಡಿಕೇರಿ: ಕೊಡಗು ಜಿಲ್ಲೆಯ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಅಡಿಯಲ್ಲಿ ಜಿಲ್ಲೆಯ ಮೂರು ಪ್ರಮುಖ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು ₹ 22 ಕೋಟಿ ಮಂಜೂರು ಮಾಡಿದೆ ಎಂದು ಲೋಕಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಿಳಿಸಿದ್ದಾರೆ.

ಕೊಡಗಿನ ಬಹುಕಾಲದ ರಸ್ತೆ ಅಭಿವೃದ್ಧಿ ಅಗತ್ಯಗಳಿಗೆ ಸ್ಪಂದಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹಾಗೂ ಭಾರತ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮಂಜೂರಾಗಿರುವ ಕಾಮಗಾರಿಗಳು: ಕೊಡ್ಲಿಪೇಟೆ–ಹೆಬ್ಬಾಲೆ ರಸ್ತೆ (ಎಸ್‍ಎಚ್-244) ಕಿ.ಮೀ. 16.70 ರಿಂದ 30 ರವರೆಗೆ, ಗೋಪಾಲಪುರ–ಬಾಣಾವರ ಹೆಬ್ಬಾಲೆ ಮಾರ್ಗವಾಗಿ ಮುಳ್ಳೂರು ಹಾಗೂ ಮಾಳಂಬಿ (ಆಯ್ದ ಭಾಗಗಳು) ಸಂಪರ್ಕಿಸುವ ಸೋಮವಾರಪೇಟೆ ತಾಲ್ಲೂಕಿನ ರಸ್ತೆ ಅಭಿವೃದ್ಧಿಗೆ ₹6 ಕೋಟಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಡಿಕೇರಿ–ಕುಟ್ಟ ರಸ್ತೆ (ಎಸ್‍ಎಚ್-89) ಚೈನೇಜ್ 4 ರಿಂದ 8, 10.50 ರಿಂದ 12.00 ಹಾಗೂ 21 ರಿಂದ 24.43 ರ ವರೆಗಿನ ಭಾಗಗಳಲ್ಲಿ, ಕುಶಾಲನಗರ ಮತ್ತು ಮಡಿಕೇರಿ ತಾಲ್ಲೂಕುಗಳನ್ನು ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ₹10 ಕೋಟಿ.

ತಲಕಾವೇರಿ ರಸ್ತೆ (ಎಸ್‍ಎಚ್-90) ಕಿ.ಮೀ. 51.00 ರಿಂದ 61 ರವರೆಗಿನ ವಿರಾಜಪೇಟೆ ತಾಲ್ಲೂಕಿನ ಆಯ್ದ ಭಾಗಗಳ ರಸ್ತೆ ಅಭಿವೃದ್ಧಿಗೆ ₹6 ಕೋಟಿ.

ಈ ಕುರಿತು ಮಾತನಾಡಿದ ಸಂಸದರಾದ ಯದುವೀರ್ ಒಡೆಯರ್ ಅವರು, ಈ ರಸ್ತೆಗಳು ಕೊಡಗು ಜಿಲ್ಲೆಯ ನಿವಾಸಿಗಳು, ರೈತರು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ವ್ಯಾಪಾರ ವಲಯದವರಿಗೆ ಅತ್ಯಂತ ಪ್ರಮುಖ ಸಂಪರ್ಕ ಮಾರ್ಗಗಳಾಗಿವೆ ಎಂದು ತಿಳಿಸಿದರು.

ಈ ಕಾಮಗಾರಿಗಳ ಅನುಷ್ಠಾನದಿಂದ ರಸ್ತೆ ಸುರಕ್ಷತೆ, ಪ್ರಯಾಣಿಕರ ಅನುಕೂಲತೆ ಹಾಗೂ ಸಾರಿಗೆ ದಕ್ಷತೆ ಹೆಚ್ಚುವುದರ ಜೊತೆಗೆ ಪ್ರವಾಸೋದ್ಯಮ ಮತ್ತು ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ ಎಂದು ಅವರು ಹೇಳಿದರು.

ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಕೊಡಗು ಜಿಲ್ಲೆಗೆ ಸ್ಥಳೀಯರ ಹಾಗೂ ಪ್ರವಾಸಿಗರ ಹೆಚ್ಚುತ್ತಿರುವ ಅಗತ್ಯಗಳನ್ನು ಪೂರೈಸಲು ಉತ್ತಮ ಗುಣಮಟ್ಟದ ರಸ್ತೆ ಮೂಲಸೌಕರ್ಯ ಅತ್ಯಗತ್ಯವಾಗಿದೆ. ಸಿಆರ್‍ಎಫ್ ಅಡಿಯಲ್ಲಿ ದೊರೆತಿರುವ ಈ ಅನುದಾನವು ಬಹುಕಾಲದಿಂದ ಅಭಿವೃದ್ಧಿಗೆ ಕಾಯುತ್ತಿದ್ದ ಪ್ರಮುಖ ರಸ್ತೆ ಭಾಗಗಳ ಉನ್ನತ್ತೀಕರಣಕ್ಕೆ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಇನ್ನಷ್ಟು ಮೂಲಸೌಕರ್ಯ ಹೂಡಿಕೆಗಳು ಹಾಗೂ ಅಭಿವೃದ್ಧಿ ಯೋಜನೆ ತರುವಲ್ಲಿ ಸಹಕರಿಸಿದ ಎಲ್ಲರಿಗೂ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular