BIG NEWS: ರಾಜ್ಯದಲ್ಲಿದೆ ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್: ಇ-ಗವರ್ನೆನ್ಸ್ ಮಾಹಿತಿ

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ ಕುಟುಂಬದವರಿಗೆ ಅನುಕೂಲವಾಗುತ್ತಿದ್ದ ಬಿಪಿಎಲ್ ಕಾರ್ಡ್ ಸೌಲಭ್ಯವನ್ನು ಕೆಲ ಅನುಕೂಲಸ್ಥರು ಪಡೆಯುತ್ತಿರುವ ಕಾರಣಕ್ಕೆ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಡೆಸುತ್ತಿದ್ದು, ನಿಯಮ ಮೀರಿ ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆಯುತ್ತಿರುವವರ ಕಾರ್ಡ್ ರದ್ದು ಪಡಿಸುವ ನಿಟ್ಟಿನಲ್ಲಿ ಸರ್ಕಾರ ತೀರ್ಮಾನ ಕೈಗೊಂಡಿದೆ. ಇದು ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ನಡುವೆ ಇ-ಗವರ್ನೆನ್ಸ್ ಇಲಾಖೆ ಶಾಕಿಂಗ್ ಮಹಿತಿಯೊಂದನ್ನು ಬಹಿರಂಗಪಡಿಸಿದೆ. ರಾಜ್ಯದಲ್ಲಿ ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ದಾರರಿದ್ದಾರೆ. ಆಗಸ್ಟ್ ತಿಂಗಳಿನಲ್ಲಿಯೇ ಆಹಾರ ಇಲಾಖೆಗೆ ಇ-ಗವರ್ನೆನ್ಸ್ ಮಾಹಿತಿ ನೀಡಿದ್ದು, 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಗಳಿವೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ 22 ಲಕ್ಷ ಬಿಪಿಎಲ್ ಕಾರ್ಡ್ ಗಳು ರದ್ದಾಗಲಿವೆಯೇ ಎಂಬ ಅನುಮಾನ ವ್ಯಕ್ತವಾಗಿದೆ.

ಇನ್ನು ಕಲಬುರಗಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಅನರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆಯಾಗಿದೆ. 78,058 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರಿನಲ್ಲಿ 65,563 ಅನರ್ಹರ ಬಳಿ ಬಿಪಿಎಲ್ ಕಾರ್ಡ್ ಇದೆ ಎಂದು ತಿಳಿದುಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read