ಕೇದಾರನಾಥ ದೇವಸ್ಥಾನದಲ್ಲಿ 228 ಕೆಜಿ ಚಿನ್ನ ನಾಪತ್ತೆ: ಜ್ಯೋತಿರ್ಮಠ ಶಂಕರಾಚಾರ್ಯ ಹೇಳಿಕೆ

ಉತ್ತರಾಖಂಡದ ಗರ್ವಾಲ್ ಹಿಮಾಲಯ ಶ್ರೇಣಿಯಲ್ಲಿರುವ ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ದೇವಾಲಯದಲ್ಲಿ 228 ಕೆಜಿ ಚಿನ್ನ ನಾಪತ್ತೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸೋಮವಾರ ಹೇಳಿದ್ದಾರೆ.

ಕೇದಾರನಾಥದಲ್ಲಿ ಚಿನ್ನದ ಹಗರಣ ನಡೆದಿದೆ, ಆ ವಿಚಾರದ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ? ಅಲ್ಲಿ ಹಗರಣ ಮಾಡಿ ಈಗ ದೆಹಲಿಯಲ್ಲಿ ಕೇದಾರನಾಥ ನಿರ್ಮಾಣವಾಗಲಿದೆಯೇ? ನಂತರ ಮತ್ತೊಂದು ಹಗರಣ ನಡೆಯಲಿದೆ. ಕೇದಾರನಾಥದಲ್ಲಿ 228 ಕೆಜಿ ಚಿನ್ನ ನಾಪತ್ತೆಯಾಗಿದೆ. ಯಾವುದೇ ವಿಚಾರಣೆ ನಡೆಸಿಲ್ಲ. ಈಗ ಇದಕ್ಕೆ ಯಾರು ಹೊಣೆ, ಅವರು ದೆಹಲಿಯಲ್ಲಿ ಕೇದಾರನಾಥವನ್ನು ನಿರ್ಮಿಸುತ್ತಾರೆ ಎಂದು ಹೇಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಮತ್ತೊಂದು ಕೇದಾರನಾಥ ದೇಗುಲ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ ಅವರ ಈ ಹೇಳಿಕೆ ಬಂದಿದೆ. ದೆಹಲಿಯ ಕೇದಾರನಾಥ ದೇವಾಲಯದ ವಿರುದ್ಧ ಅರ್ಚಕರು ಪ್ರತಿಭಟನೆ ನಡೆಸಿದ್ದರು. ಜುಲೈ 10 ರಂದು ದೆಹಲಿಯಲ್ಲಿ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಭಾಗವಹಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read