HomeKarnatakaಸನ್ನಡತೆ ಆಧಾರದ ಮೇಲೆ 24 ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಖೈದಿಗಳು ಬಿಡುಗಡೆ

ಸನ್ನಡತೆ ಆಧಾರದ ಮೇಲೆ 24 ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಖೈದಿಗಳು ಬಿಡುಗಡೆ

ಬೆಂಗಳೂರು: ತಪ್ಪು ಮಾಡಿ ಜೈಲು ಸೇರಿದ್ದ ಖೈದಿಗಳ ಮನಪರಿವರ್ತನೆಯನ್ನು ಪರಿಗಣಿಸಿ, ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವವಾಗಿ ಬಿಡುಗಡೆಗೊಳಿಸಲು ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ವಿವಿಧ ಜೈಲುಗಳಲ್ಲಿದ್ದ ಒಟ್ಟು 24 ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಖೈದಿಗಳನ್ನು ಇಂದು ಜೈಲಿನಿಂದ ಬಿಡುಗಡೆಗೊಳಿಸಲಾಯಿತು.

ಜೈಲಿನ ಕತ್ತಲ ಕೋಣೆಯಿಂದ ಹೊರಬಂದು ಸ್ವತಂತ್ರ ಹಕ್ಕಿಗಳಾಗಿ ಹೊಸ ಜೀವನ ಆರಂಭಿಸಲು ಖೈದಿಗಳ ಅಧಿಕೃತ ಬಿಡುಗಡೆ ಕಾರ್ಯಕ್ರಮವು ಇಂದು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಯಶಸ್ವಿಯಾಗಿ ನಡೆಯಿತು.

ಈ ವಿಶೇಷ ಬಿಡುಗಡೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಖೈದಿಗಳಿಗೆ ಬಿಡುಗಡೆಯ ಆದೇಶ ಪತ್ರಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಕಾರಾಗೃಹ ಇಲಾಖೆಯ ಎಡಿಜಿಪಿ ಅಲೋಕ್ ಕುಮಾರ್, ಜೈಲು ಮುಖ್ಯ ಸೂಪರಿಂಟೆಂಡೆಂಟ್ ಅಂಶು ಕುಮಾರ್ ಸೇರಿದಂತೆ ಕಾರಾಗೃಹ ಇಲಾಖೆಯ ಉನ್ನತ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಮ್ಮೆ ಅಪರಾಧ ಕೃತ್ಯ ಎಸಗಿ ಜೈಲು ಸೇರಿದ್ದ ಈ ಖೈದಿಗಳು, ಶಿಕ್ಷೆಯ ಅವಧಿಯಲ್ಲಿ ಜೈಲಿನ ನಿಯಮಾವಳಿಗಳನ್ನು ಪಾಲಿಸಿ, ಉತ್ತಮ ನಡವಳಿಕೆಯನ್ನು ರೂಢಿಸಿಕೊಂಡಿದ್ದರು. ಇವರಲ್ಲಿ ಉಂಟಾದ ಸಕಾರಾತ್ಮಕ ಮನಪರಿವರ್ತನೆ ಮತ್ತು ಇವರು ಒಳ್ಳೆಯ ಮನುಷ್ಯರಾಗಿ ಬದಲಾದ ಹಿನ್ನೆಲೆಯನ್ನು ಕಾನೂನುಬದ್ಧವಾಗಿ ಪರಿಶೀಲಿಸಿ, ಇಲಾಖೆಯ ಶಿಫಾರಸಿನ ಮೇರೆಗೆ ರಾಜ್ಯಪಾಲರು ಇವರ ಅವಧಿ ಪೂರ್ವ ಬಿಡುಗಡೆಗೆ ಅನುಮೋದನೆ ನೀಡಿದ್ದಾರೆ. ಜೈಲಿನಿಂದ ಹೊರಬಂದ ಖೈದಿಗಳು ಹಾಗೂ ಅವರ ಕುಟುಂಬಸ್ಥರಲ್ಲಿ ಹೊಸ ಭರವಸೆಯ ಮೂಡಿದ್ದು, ಸಮಾಜದಲ್ಲಿ ಮುಖ್ಯವಾಹಿನಿಗೆ ಮರಳಲು ಸಂತಸ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular