BIG NEWS: ಈ ಬಾರಿಯ ಯೋಗ ದಿನಕ್ಕೆ 25 ಕೋಟಿ ಜನರ ನಿರೀಕ್ಷೆ: ಸಚಿವ ಸೋನೊವಾಲ್​

ದಿಬ್ರುಗಢ (ಅಸ್ಸಾಂ): ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಾರ್ವಜನಿಕರಿಂದ ಅಪಾರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ವರ್ಷ ಕನಿಷ್ಠ 25 ಕೋಟಿ ಜನರು ಸೇರುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಶನಿವಾರ ಹೇಳಿದ್ದಾರೆ.

ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜಾಗತಿಕ ದಿನಾಚರಣೆ ನಡೆಯಲಿದ್ದು, ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ನೇತೃತ್ವದಲ್ಲಿ ರಾಷ್ಟ್ರೀಯ ಆಚರಣೆ ನಡೆಯಲಿದೆ ಎಂದು ಸೋನೊವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ದಿನವನ್ನು ಯೋಗ ದಿನವನ್ನಾಗಿ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯಲ್ಲಿ ತಿಳಿಸಿದ್ದರು. ಇದಕ್ಕೆ ಅಭೂತಪೂರ್ವ ಬೆಂಬಲ ದೊರೆತಿದೆ. ವಿಶ್ವಾದ್ಯಂತ ವಿವಿಧ ಕ್ಷೇತ್ರಗಳ ಜನರು, ಗಣ್ಯರು ಇದರಲ್ಲಿ ಭಾಗವಹಿಸಲಿದ್ದಾರೆ. ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಎಲ್ಲರೂ ಉತ್ಸುಕರಾಗಿದ್ದಾರೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read