ವಿಧಾನಸೌಧದ ಆವರಣದಲ್ಲಿ ಇಂದು 25 ಅಡಿ ಎತ್ತರದ ಕಂಚಿನ ಭುವನೇಶ್ವರಿ ಪ್ರತಿಮೆ ಅನಾವರಣ..! ಏನಿದರ ವಿಶೇಷತೆ..?

ಬೆಂಗಳೂರು :  25 ಅಡಿ ಎತ್ತರದ ಕಂಚಿನ ಭುವನೇಶ್ವರಿ ಪ್ರತಿಮೆ ಅನಾವರಣಗೊಳ್ಳಲಿದೆ. ಸಿಎಂ ಸಿದ್ದರಾಮಯ್ಯ ಅವರು ಭುವನೇಶ್ವರಿ ಪ್ರತಿಮೆ ಅನಾವರಣಗೊಳಿಸಲಿದ್ದಾರೆ.

ಮೈಸೂರು ರಾಜ್ಯ ಕರ್ನಾಟಕವೆಂದು ನಾಮಕರಣಗೊಂಡು 50 ವಸಂತಗಳು ಸಂದಿರುವ ಹಿನ್ನೆಲೆಯಲ್ಲಿ ‘ಕರ್ನಾಟಕ ಸಂಭ್ರಮ – 50 ‘ರ ಸವಿನೆನಪಿಗಾಗಿ ನಾಡ ದೇವತೆ ತಾಯಿ ಭುವನೇಶ್ವರಿಯ ಬೃಹತ್ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದು, ಇಂದು ಸಂಜೆ 4 ಗಂಟೆಗೆ ಅನಾವರಣ ಮಾಡಲಾಗುವುದು. ಸಮಸ್ತರಿಗೂ ಹೃದಯಪೂರ್ವಕ ಸ್ವಾಗತ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಪ್ರತಿಮೆಯ ವಿಶೇಷತೆಗಳು

ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ.

ಮುಂಭಾಗದಲ್ಲಿ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ.

ಹೊಯ್ಸಳ, ಚಾಲುಕ್ಯಕದಂಬ ಹಾಗೂ ಆಧುನಿಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ.

ಪ್ರತಿಮೆಯಲ್ಲಿ ಹೊಯ್ಸಳ ಲಾಂಛನ, ವೈಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇರಲಿದೆ.

ಪ್ರತಿಮೆಯ ಸುತ್ತಲೂ ಉದ್ಯಾನ ನಿರ್ಮಿಸಲಾಗಿದ್ದು, ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದೆ.

ವಿಧಾನಸೌಧದ ಪಶ್ಚಿಮ ದ್ವಾರದಿಂದ ನಾಡದೇವಿ ವೀಕ್ಷಣೆಗೆ ಸಾರ್ವಜನಿಕರಿಗೆ ದಿನಪೂರ್ತಿ ಮುಕ್ತ ಅವಕಾಶ ಕಲ್ಪಿಸಲಾಗುತ್ತದೆ. ಇದಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read