BIG NEWS: ಇಂದು ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವ ಹಿನ್ನಲೆಯಲ್ಲಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಾಣ ಮಾಡಿರುವ 25 ಅಡಿ ಎತ್ತರದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಮಾಡಲಿದ್ದಾರೆ.

ಸೋಮವಾರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ನಾಲ್ಕು ದಿಕ್ಕುಗಳಿಂದ ವಿಧಾನಸೌಧದತ್ತ ಕಲಾತಂಡಗಳ ಮೆರವಣಿಗೆ ಆಗಮಿಸಲಿದೆ. ನಾಡಿನ ಪ್ರಮುಖ ಸಾಹಿತಿಗಳು, ಜ್ಞಾನಪೀಠ ಪುರಸ್ಕೃತರು, ಸಾಧಕರ ಭಾವಚಿತ್ರಗಳು, ವಿವಿಧ ಸಾಮ್ರಾಜ್ಯಗಳ ಪ್ರತಿಕೃತಿಗಳನ್ನು ಮೆರವಣಿಗೆ ಮೂಲಕ ತರಲಾಗುವುದು. ಕಲಾತಂಡಗಳು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

ಸಂಜೆ 6 ಗಂಟೆಗೆ ಪ್ರತಿಮೆ ಅನಾವರಣ ನಡೆಯಲಿದೆ. ನಂತರ ಕನ್ನಡ ಗೀತೆಗಳ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು, ಕನ್ನಡ ಸಂಘಟನೆಗಳು ಈ ಹಬ್ಬದ ವಾತಾವರಣದಲ್ಲಿ ಪಾಲ್ಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read