ಚಿಕ್ಕಮಗಳೂರು : ಖಾಸಗಿ ಬಸ್ ಪಲ್ಟಿಯಾಗಿ 25 ಮಂದಿಗೆ ಗಾಯಗೊಂಡು, ಇಬ್ಬರ ಸ್ಥಿತಿ ಗಂಭೀರವಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವಲ ಗೂಲ್ ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಬೆಂಗಳೂರಿನಿಂದ ಕುದುರೆಮುಖ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, 40 ಕ್ಕೂ ಹೆಚ್ಚು ಯುವಕ ಯುವತಿಯರು ಟ್ರಕ್ಕಿಂಗ್ ಗೆ ಬಂದಿದ್ದರು.ಪರಿಣಾಮ 25 ಮಂದಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

