ಬೆಂಗಳೂರು: ಗೋವಾದಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನವಾಗಿದ್ದಾರೆ. ಇವರಲ್ಲಿ ಕರ್ನಾಟಕದ ಓರ್ವ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಥಣಿಸಂದ್ರದ ಹೆಗಡೆ ನಗರ ನಿವಾಸಿ ಇಶಾಕ್(25) ಮೃತಪಟ್ಟವರು. ಸ್ನೇಹಿತರೊಂದಿಗೆ ಗೋವಾ ಪ್ರವಾಸಕ್ಕೆ ತೆರಳಿದ್ದ ಇಶಾಕ್ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾರೆ. ಪಬ್ ನಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಇಶಾಕ್ ಮತ್ತು ಸ್ನೇಹಿತರು ಹೊರಗೆ ಬಂದಿದ್ದಾರೆ. ಆದರೆ ಮರೆತುಬಂದಿದ್ದ ಮೊಬೈಲ್ ತರಲು ಒಳಗೆ ಹೋಗಿದ್ದ ಇಶಾಕ್ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ.
