HomeEntertainmentಇಂಡಸ್ಟ್ರಿಗೆ ನಟ ದರ್ಶನ್ ಬಂದು 25 ವರ್ಷ ; ಇಂದು `D 25 ಬೆಳ್ಳಿ ಪರ್ವ’...

ಇಂಡಸ್ಟ್ರಿಗೆ ನಟ ದರ್ಶನ್ ಬಂದು 25 ವರ್ಷ ; ಇಂದು `D 25 ಬೆಳ್ಳಿ ಪರ್ವ’ ಕಾರ್ಯಕ್ರಮ ಆಯೋಜನೆ

ಮಂಡ್ಯ : ನಟ ದರ್ಶನ್ ಕನ್ನಡ ಇಂಡಸ್ಟ್ರಿಗೆ 25 ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಂಡ್ಯದಲ್ಲಿ ಡಿ 25 ಬೆಳ್ಳಿ ಪರ್ವ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಇಂದು ಸಂಜೆ 5 ಗಂಟೆಗೆ ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನದ ಮೈದಾನದಲ್ಲಿ ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮಿ ಸಾನಿಧ್ಯದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ. ಈ ವೇಳೆ ಸಂಸದೆ ಸುಮಲತಾ ಅಂಬರೀಷ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸಲಿದ್ದಾರೆ.

ಶ್ರೀರಂಗಪಟ್ಟಣದತ್ತ ಅಭಿಮಾನಿಗಳ ದಂಡು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟ ದರ್ಶನ್ ಅವರನ್ನು ನೋಡಲು, ಡಿ.25 ಕಾರ್ಯಕ್ರಮದಲ್ಲಿ ಭಾಗಿಯಾಗಲು ಅಭಿಮಾನಿಗಳು , ಸೆಲೆಬ್ರಿಟಿಗಳು ಶ್ರೀರಂಗಪಟ್ಟಣದತ್ತ ಹೆಜ್ಜೆ ಹಾಕುತ್ತಿದ್ದಾರೆ. ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗವಹಿಸುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular