ಪಾಕಿಸ್ತಾನದ ಜೈಲಿನಲ್ಲಿದ್ದಾನೆ 26/11 ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ : ವಿಶ್ವಸಂಸ್ಥೆಯಿಂದ ಮಹತ್ವದ ಮಾಹಿತಿ

 

ನವದೆಹಲಿ : ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌,  ಭಯೋತ್ಪಾದಕ ಹಫೀಜ್ ಸಯೀದ್ ಪಾಕಿಸ್ತಾನ ಸರ್ಕಾರದ ವಶದಲ್ಲಿದ್ದಾನೆ ಮತ್ತು 78 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ ಎಂದು ವಿಶ್ವಸಂಸ್ಥೆ ಮಾಹಿತಿಯೊಂದನ್ನು ನೀಡಿದೆ.

ಪಾಕಿಸ್ತಾನದಿಂದ ನಿಷೇಧಿಸಲ್ಪಟ್ಟ ವಿಶ್ವಸಂಸ್ಥೆ ತನಿಖೆ ನಡೆಸುತ್ತಿರುವ ಭಯೋತ್ಪಾದಕ ಸಯೀದ್ ನನ್ನು ಹಸ್ತಾಂತರಿಸುವಂತೆ ಭಾರತ ಡಿಸೆಂಬರ್ ನಲ್ಲಿ ಒತ್ತಾಯಿಸಿತ್ತು. ನಿಷೇಧಿತ ಭಯೋತ್ಪಾದಕ ಸಂಘಟನೆ ಜಮಾತ್-ಉದ್-ದವಾ ಮುಖ್ಯಸ್ಥ ಹಫೀಜ್ ಸಯೀದ್ ಅನೇಕ ಭಯೋತ್ಪಾದಕ ಪ್ರಕರಣಗಳಲ್ಲಿ ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿದ್ದಾನೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಲ್-ಖೈದಾ ನಿರ್ಬಂಧಗಳ ಸಮಿತಿಯು 2008 ರ ಡಿಸೆಂಬರ್ನಲ್ಲಿ ಹಫೀಜ್ ಸಯೀದ್ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದೆ ಎಂದು ವಿಶ್ವಸಂಸ್ಥೆಯ ನಿರ್ಬಂಧಗಳ ಸಮಿತಿಯು ಪರಿಷ್ಕೃತ ಹೇಳಿಕೆಯಲ್ಲಿ ತಿಳಿಸಿದೆ.

ಭಯೋತ್ಪಾದಕ ಹಣಕಾಸುಗೆ ಸಂಬಂಧಿಸಿದ ಏಳು ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ನಂತರ ಸಯೀದ್‌ ಫೆಬ್ರವರಿ 12, 2020 ರಿಂದ 78 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ. ಮುಂಬೈ ದಾಳಿಯ ಹೊರತಾಗಿ ಏಳು ಭಯೋತ್ಪಾದಕ ದಾಳಿಗಳಿಗೆ ಹಣಕಾಸು ಒದಗಿಸಿದ ಆರೋಪದಲ್ಲಿ ಸಯೀದ್ ಶಿಕ್ಷೆಗೆ ಗುರಿಯಾಗಿದ್ದಾನೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read