ಗಮನಿಸಿ: ಸೆ. 26 ರಿಂದ ಅ. 25 ರವರೆಗೆ 4ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ

ಸೆ.26ರಿಂದ ಜಾನುವಾರುಗಳಿಗೆ 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ – Vijayapatha – ವಿಜಯಪಥ

ಧಾರವಾಡ ಜಿಲ್ಲಾ ಪಂಚಾಯತ್ ಮತ್ತು ಪಶುಪಾಲನಾ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಧಾರವಾಡ ಜಿಲ್ಲೆಯ ಎಲ್ಲ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 25, 2023 ರ ವರೆಗೆ ಜಾನುವಾರುಗಳಿಗೆ ತಗಲುವ ಕಾಲುಬಾಯಿ ರೋಗ ತಡೆಗಟ್ಟಲು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 4ನೇ ಸುತ್ತಿನ ಕಾಲುಬಾಯಿ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಕಾಲುಬಾಯಿ ರೋಗದಿಂದ ರೈತರಿಗೆ ಆರ್ಥಿಕ ಸಂಕಷ್ಟ ಉಂಟು ಮಾಡುವ, ಜಾನುವಾರುಗಳಲ್ಲಿ ಗರ್ಭ ಕಟ್ಟುವಿಕೆಯಲ್ಲಿ ವಿಳಂಬ, ಸಾಮರ್ಥ್ಯ ನಷ್ಟ ಮತ್ತು ಹಾಲಿನ ಇಳುವರಿಯಲ್ಲಿ ಇಳಿಮುಖವಾಗುವ ಸಾಧ್ಯತೆ ಇರುವುದರಿಂದ ಹಾಗೂ ರೋಗದಿಂದ ಪೂರ್ಣ ಸುರಕ್ಷತೆಗಾಗಿ ಮೂರು ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಉಚಿತವಾಗಿ ಕಾಲುಬಾಯಿ ಲಸಿಕೆಯನ್ನು ಹಾಕುವುದರ ಮೂಲಕ ಕಾಲುಬಾಯಿ ರೋಗವನ್ನು ಮುಕ್ತ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಎಲ್ಲ ರೈತರು, ಸಾರ್ವಜನಿಕರು ತಮ್ಮ ಜಾನುವಾರುಗಳಿಗೆ ಉಚಿತ ಲಸಿಕೆ ಹಾಕಿಸಬೇಕೆಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read