HomeCrimeBIG NEWS: ಅಪರಾಧ ನಡೆದ 27 ವರ್ಷಗಳ ನಂತರ ಅತ್ಯಾಚಾರಿಗೆ ಶಿಕ್ಷೆ

BIG NEWS: ಅಪರಾಧ ನಡೆದ 27 ವರ್ಷಗಳ ನಂತರ ಅತ್ಯಾಚಾರಿಗೆ ಶಿಕ್ಷೆ

ಉತ್ತರ ಪ್ರದೇಶದ ಕೌಶಂಬಿಯಲ್ಲಿ 27 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ ಎಂದು ವಕೀಲರು ತಿಳಿಸಿದ್ದಾರೆ.

ವಿಶೇಷ ನ್ಯಾಯಾಧೀಶರಾದ (ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ) ಶಿರಿನ್ ಜೈದಿ, ಅಪರಾಧಿ ಅವಧೇಶ್ ಶುಕ್ಲಾನನ್ನು ತಪ್ಪಿತಸ್ಥನೆಂದು ಪರಿಗಣಿಸಿ ಈ ಶಿಕ್ಷೆ ವಿಧಿಸಿದ್ದಾರೆ.

ಮಾರ್ಚ್ 11, 1997 ರಂದು ನಡೆದ ಘಟನೆಯ ಬಗ್ಗೆ ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ ಪಂಕಜ್ ಸೋಂಕರ್ ಹೇಳಿದ್ದಾರೆ. ಶುಕ್ಲಾ ತನ್ನನ್ನು ಹೊಲಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಲ್ಲದೇ ಯಾರಿಗಾದರೂ ವಿಷಯ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಅವರು ಹೇಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐಪಿಸಿಯ ಸೆಕ್ಷನ್ 376 (ಅತ್ಯಾಚಾರಕ್ಕೆ ಶಿಕ್ಷೆ) ಮತ್ತು 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸೈನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ವಕೀಲರು ತಿಳಿಸಿದ್ದಾರೆ.

ಶುಕ್ರವಾರ ನ್ಯಾಯಾಧೀಶರು ಶುಕ್ಲಾನನ್ನು ತಪ್ಪಿತಸ್ಥನೆಂದು ಪರಿಗಣಿಸಿ 10 ವರ್ಷಗಳ ಜೈಲು ಶಿಕ್ಷೆ ಮತ್ತು 6 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ ಎಂದು ಸೋಂಕರ್ ಹೇಳಿದರು.

ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಏಳು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಸರಕಾರಿ ವಕೀಲರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular