BIG NEWS: ಪೇಶಾವರ ಮಸೀದಿಯಲ್ಲಿ ಬಾಂಬ್ ದಾಳಿ; 28 ಜನರ ದುರ್ಮರಣ; 150 ಜನರಿಗೆ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಬಾಂಬ್ ದಾಳಿ ನಡೆದಿದ್ದು, 28 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪಾಕಿಸ್ತಾನದ ವಾಯುವ್ಯ ನಗರದ ಪೇಶಾವರದ ಮಸೀದಿಯಲ್ಲಿ ಬಾಂಬ್ ಸ್ಫೋಟಿಸಲಾಗಿದ್ದು, 28 ಜನರು ಸಾವನ್ನಪ್ಪಿದ್ದು, ಸಾವು-ನೋವುಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಘಟನೆಯಲ್ಲಿ 150 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾರ್ಥನೆಗಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮಸೀದಿಯಲ್ಲಿ ಸೇರಿದ್ದರು. ಈ ವೇಳೆ ಬಾಂಬ್ ಸ್ಫೋಟ ಸಂಭವಿಸಿದೆ. ಕಟ್ಟಡದ ಒಂದು ಭಾಗ ಸಂಪೂರ್ಣ ಕುಸಿದಿದೆ. ಹಲವರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read