HomeInternationalBIG NEWS: ಪೇಶಾವರ ಮಸೀದಿಯಲ್ಲಿ ಬಾಂಬ್ ದಾಳಿ; 28 ಜನರ ದುರ್ಮರಣ; 150 ಜನರಿಗೆ ಗಾಯ

BIG NEWS: ಪೇಶಾವರ ಮಸೀದಿಯಲ್ಲಿ ಬಾಂಬ್ ದಾಳಿ; 28 ಜನರ ದುರ್ಮರಣ; 150 ಜನರಿಗೆ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಬಾಂಬ್ ದಾಳಿ ನಡೆದಿದ್ದು, 28 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪಾಕಿಸ್ತಾನದ ವಾಯುವ್ಯ ನಗರದ ಪೇಶಾವರದ ಮಸೀದಿಯಲ್ಲಿ ಬಾಂಬ್ ಸ್ಫೋಟಿಸಲಾಗಿದ್ದು, 28 ಜನರು ಸಾವನ್ನಪ್ಪಿದ್ದು, ಸಾವು-ನೋವುಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಘಟನೆಯಲ್ಲಿ 150 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಾರ್ಥನೆಗಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮಸೀದಿಯಲ್ಲಿ ಸೇರಿದ್ದರು. ಈ ವೇಳೆ ಬಾಂಬ್ ಸ್ಫೋಟ ಸಂಭವಿಸಿದೆ. ಕಟ್ಟಡದ ಒಂದು ಭಾಗ ಸಂಪೂರ್ಣ ಕುಸಿದಿದೆ. ಹಲವರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular