ಕೊಪ್ಪಳ : ಟಾಟಾ ಏಸ್ ಪಲ್ಟಿಯಾಗಿ 28 ನರೇಗಾ ಕಾರ್ಮಿಕರು ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಬರಗೂರು ಕಮಾನ್ ಬಳಿ ಈ ಅಪಘಾತ ಸಂಭವಿಸಿದೆ.. ವೇಗವಾಗಿ ಬರುತ್ತಿದ್ದ ಟಾಟಾ ಏಸ್ ಏಕಾಏಕಿ ಪಲ್ಟಿಯಾಗಿದೆ. ಪರಿಣಾಮ 28 ನರೇಗಾ ಕಾರ್ಮಿಕರು ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
You Might Also Like
TAGGED:ಟಾಟಾ ಏಸ್ ಪಲ್ಟಿ