ಹಾಸನ: ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ನೊಂದ ವಿದ್ಯಾರ್ಥಿ ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ.
ಮನೋಜ್ (18) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾಅರ್ಥಿ. ಶಿಕ್ಷಕ ಪ್ರಕಾಶ್ ಎಂಬುವವರ ಪುತ್ರ ನಿನ್ನೆಯಷ್ಟೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿತ್ತು. ಮನೋಜ್ ಶೇ.79 ರಷ್ಟು ಅಂಕ ಪಡೆದಿದ್ದ. ಆದಾಗ್ಯೂ ಕಡಿಮೆ ಅಂಕ ಬಂತೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾತ್ರಿ ಮನೆಯಲ್ಲಿಯೇ ನೇಣುಬಿಗಿದುಕೊಂಡು ಮನೋಜ್ ಸಾವಿಗೆ ಶರಣಾಗಿದ್ದಾನೆ. ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.