HomeLive Newsದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಡವಟ್ಟು: 600ಕ್ಕೆ 680 ಅಂಕ ನೀಡಿದ ಪಿಯು ಬೋರ್ಡ್

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಡವಟ್ಟು: 600ಕ್ಕೆ 680 ಅಂಕ ನೀಡಿದ ಪಿಯು ಬೋರ್ಡ್

ಬೆಂಗಳೂರು: ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಹಲವು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಕಳೆದ ವರ್ಷಕ್ಕಿಂತಲೂ ಈ ವರ್ಷ ಅತಿ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆದರೆ ಪಿಯು ಬೋರ್ಡ್ ನ ಎಡವಟ್ಟೊಂದು ಇದೀಗ ಬಯಲಾಗಿದೆ. ಕರ್ನಾಟಕ ಸರ್ಕಾರದ ಅಧಿಕೃತ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಅಂಕಪಟ್ಟಿಯಲ್ಲಿಯೇ ಗಂಭೀರ ಲೋಪವೊಂದು ಕಂಡುಬಂದಿದೆ. 600 ಅಂಕಗಳ ಪರೀಕ್ಷೆಗೆ 683 ಅಂಕಗಳನ್ನು ನೀಡಿದ ಬೋರ್ಡ್​ನ ಕೃತ್ಯ ಬೆಳಕಿಗೆ ಬಂದಿದೆ.

ಇನ್ನೊಂದು ವಿಚಿತ್ರವೆಂದರೆ ಆರು ವಿಷಯಗಳಲ್ಲಿಯೂ 100ಕ್ಕೂ ಹೆಚ್ಚು ಅಂಕಗಳನ್ನು ನೀಡಲಾಗಿದೆ. ಕಳೆದ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ಕೆಲ ವಿದ್ಯಾರ್ಥಿಗಳು ಈ ವರ್ಷ ಮರು ಪರೀಕ್ಷೆ ಬರೆದಿದ್ದರು. ಈ ವಿದ್ಯಾರ್ಥಿಗಳ ಫಲಿತಾಂಶ ಕೂಡ ಗುರುವಾರ ಏಪ್ರಿಲ್ 9ರಂದು ಪ್ರಕಟವಾಗಿದ್ದು, ಅಧಿಕೃತ ವೆಬ್‌ಸೈಟ್‌ನಲ್ಲಿಯೇ ಈ ರೀತಿಯ ಎಡವಟ್ಟು ನಡೆದಿರುವುದು ಮುಜುಗರ ತಂದಿದೆ. 600 ಅಂಕಗಳ ಪರೀಕ್ಷೆಗೆ 683 ಅಂಕಗಳನ್ನು ನೀಡಿಲಾಗಿದೆ. ಕೆಲ ವಿದ್ಯಾರ್ಥಿಗಳಿಗೆ ಆರು ವಿಷಯಗಳಲ್ಲೂ 100ಕ್ಕೂ ಹೆಚ್ಚು ಅಂಕಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

Karresults.nic.in ವೆಬ್​ಸೈಟ್​ನಲ್ಲಿ ಪ್ರಕಟವಾದ ಫಲಿತಾಂಶದಲ್ಲಿ ಮಾತ್ರ ಈ ಲೋಪ ಕಾಣಿಸಿದೆ. ಆದರೆ ಡಿಜಿ ಲಾಕರ್‌ನಲ್ಲಿ ಲಭ್ಯವಿರುವ ಅದೇ ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯಲ್ಲಿ ಅಂಕಗಳು ಸರಿಯಾಗಿರುವುದು ಗಮನಾರ್ಹವಾಗಿದೆ.

ಇದರಿಂದ ವೆಬ್‌ಸೈಟ್ ಡೇಟಾ ಅಪ್‌ಲೋಡ್ ವೇಳೆ ತಾಂತ್ರಿಕ ದೋಷ ಸಂಭವಿಸಿರುವ ಸಾಧ್ಯತೆ ವ್ಯಕ್ತವಾಗಿದೆ. ಈ ಎಡವಟ್ಟಿನಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮೂಡಿದ್ದು, ಫಲಿತಾಂಶದ ನಿಖರತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular