HomeKarnataka3 ನೇ ಪಟ್ಟಿಯಲ್ಲಿ ಟಿಕೆಟ್ ಸಿಕ್ಕೇ ಸಿಗುತ್ತೆ; ಅಖಂಡ ವಿಶ್ವಾಸ

3 ನೇ ಪಟ್ಟಿಯಲ್ಲಿ ಟಿಕೆಟ್ ಸಿಕ್ಕೇ ಸಿಗುತ್ತೆ; ಅಖಂಡ ವಿಶ್ವಾಸ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿಯೂ ಕೆಲ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿರುವ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಹಾಲಿ ಶಾಸಕರು ದೌಡಾಯಿಸಿದ್ದು, ಮೂರನೇ ಪಟ್ಟಿಯಲ್ಲಿ ಟಿಕೆಟ್ ನೀಡುವಂತೆ ಮನವಿ ಮಾಡುತ್ತಿದ್ದಾರೆ.

ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗದ ಕಾರಣಕ್ಕೆ ಕಂಗಾಲಾಗಿರುವ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ, ಸಿದ್ರಾಮಯ್ಯ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಸಿದ್ದರಾಮಯ್ಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಖಂಡ ಶ್ರೀನಿವಾಸ್ ಮೂರ್ತಿ, ಮೂರನೆ ಪಟ್ಟಿಯಲ್ಲಿ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಜಮೀರ್ ಅಹ್ಮದ್ ನನ್ನ ಬೆನ್ನಿಗೆ ನಿಂತಿದ್ದಾರೆ. ಮೂರನೆ ಪಟ್ಟಿಯಲ್ಲಿ ಟಿಕೆಟ್ ಸಿಗುವುದು ಖಚಿತ ಎಂದು ಹೇಳಿದರು. ನಾನು ಯಾವುದೇ ಪಕ್ಷಾಂತರ ಆಗುವ ಯೋಚನೆಯಿಲ್ಲ ಎರಡು ಪಟ್ಟಿಯಲ್ಲಿ ಟಿಕೆಟ್ ಸಿಗದಿರಲು ಕಾಣದ ಕೈಗಳ ಕೈವಾಡದ ಬಗ್ಗೆ ಮಾಹಿತಿ ಇಲ್ಲ. ಮೂರನೇ ಪಟ್ಟಿಯಲ್ಲಿ ನನಗೆ ಟಿಕೆಟ್ ಸಿಕ್ಕೇ ಸಿಗುತ್ತೇ ಎಂಬ ವಿಶ್ವಾಸವಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular