ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಏ.23 ಮತ್ತು 24ರಂದು ನಡೆಸಲು ಸಕಲ ತಯಾರಿ ಮಾಡಿಕೊಂಡಿದೆ. ಗಡಿನಾಡು, ಹೊರನಾಡು ಕನ್ನಡಿಗರಿಗೆ ಏ.22ರಂದು ಪರೀಕ್ಷೆ ನಡೆಯಲಿದೆ.
ಈ ಪರೀಕ್ಷೆಯನ್ಜು 3.3 ಲಕ್ಷ ಮಂದಿ ತೆಗೆದುಕೊಂಡಿದ್ದು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ 745 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಅಭ್ಯರ್ಥಿಗಳಿಗೆ ವಸ್ರ್ರ ಸಂಹಿತೆ ಕೂಡ ಜಾರಿ ಮಾಡಲಾಗಿದೆ. ಹಾಗೆಯೇ ಮೊಬೈಲ್, ಎಲೆಕ್ಟ್ರಾನಿಕ್ ವಸ್ತು, ಶ್ರವಣ ಸಾಧನ ಇತ್ಯಾದಿ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ತೆಗೆದುಕೊಂಡು ಹೋಗಲು ನಿಷೇಧಿಸಲಾಗಿದೆ.
ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಈ ಅಟ್ಯಾಚ್ಮೆಂಟ್ ನಲ್ಲಿ ಇದ್ದು ಅದನ್ನು ಓದಿಕೊಂಡು ಪಾಲಿಸಲು ಕೋರಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

