ಸಾಮಾಜಿಕ ಜಾಲತಾಣದಲ್ಲಿ ಸಹಪಾಠಿ ಅಶ್ಲೀಲ ಚಿತ್ರ ಪೋಸ್ಟ್; 10 ನೇ ತರಗತಿ ವಿದ್ಯಾರ್ಥಿಗಳು ಅರೆಸ್ಟ್

ಪುಣೆಯಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತಮ್ಮ ಸಹಪಾಠಿಗಳ ಅಶ್ಲೀಲ ಚಿತ್ರಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಕ್ಕಾಗಿ ಹತ್ತನೇ ತರಗತಿಯ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಹಡಪ್ಸರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 16 ರಿಂದ ಜೂನ್ 30 ರ ನಡುವೆ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಆರೋಪಿ ವಿದ್ಯಾರ್ಥಿಗಳು ತಮ್ಮ ನಾಲ್ವರು ಸಹಪಾಠಿಗಳ ಫೋಟೋಗಳು ಮತ್ತು ವೀಡಿಯೊಗಳನ್ನು ಗುಟ್ಟಾಗಿ ಸೆರೆಹಿಡಿದಿದ್ದಾರೆ. ನಂತರ ಅವರು ಟೆಲಿಗ್ರಾಮ್ ಬಾಟ್ ಅಪ್ಲಿಕೇಶನ್ ಬಳಸಿಕೊಂಡು ಅದನ್ನು ವಯಸ್ಕ ವಿಡಿಯೋವಾಗಿ ತಯಾರಿಸಲಾಗಿದೆ.

ಒಬ್ಬ ಆರೋಪಿ ತನ್ನ ಸ್ವಂತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಷಯವನ್ನು ಪೋಸ್ಟ್ ಮಾಡಿದ್ದಾನೆ. ನಂತ್ರ ಅದನ್ನು ವಿದ್ಯಾರ್ಥಿಯೊಬ್ಬರು ತಮ್ಮ ಶಾಲಾ ಶಿಕ್ಷಕರಿಗೆ ತಿಳಿಸಿದ್ದಾರೆ. ವಿಷ್ಯ ಪೋಷಕರಿಗೆ ತಿಳಿದಿದೆ. ಆತಂಕಕಾರಿ ಘಟನೆ ನಂತರ ಸಂತ್ರಸ್ತರ ಪೋಷಕರು ಹಡಪ್ಸರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ಹಡಪ್ಸರ್ ಪೊಲೀಸರು ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ಪಂಧ್ರೆ, ಇದು ಅತ್ಯಂತ ಸೂಕ್ಷ್ಮ ವಿಷಯ, ನಾವು ಮೂವರೂ ಅಪ್ರಾಪ್ತ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿದ್ದೇವೆ, ಅವರ ಬಳಿಯಿದ್ದ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದೇವೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read