HomeKarnatakaವಾಹನ ಸವಾರರೇ ಗಮನಿಸಿ: ಫೆ.26 ರಾಜ್ಯ ಹೆದ್ದಾರಿಗಳ ಸಂಚಾರ ಸಮೀಕ್ಷೆ

ವಾಹನ ಸವಾರರೇ ಗಮನಿಸಿ: ಫೆ.26 ರಾಜ್ಯ ಹೆದ್ದಾರಿಗಳ ಸಂಚಾರ ಸಮೀಕ್ಷೆ

ಕರ್ನಾಟಕದ ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳಲ್ಲಿ ಸಂಚಾರ ನಡೆಸುವ ವಾಹನ ಸವಾರರಿಗೆ ಮಹತ್ವದ ಮಾಹಿತಿ ಒಂದಿದೆ. ಫೆಬ್ರವರಿ 26 ರಿಂದ 28ರ ತನಕ ರಾಜ್ಯದಲ್ಲಿ ಸಂಚಾರ ಸಮೀಕ್ಷೆಗಳು ನಡೆಯಲಿವೆ. ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ರಸ್ತೆಗಳ ಸ್ಥಿತಿಗತಿ ಸುಧಾರಿಸಲು ಇದು ಅನುಕೂಲ ಮಾಡಿಕೊಡಲಿದೆ.

ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ವಾಹನ ಸಂಚಾರ ಸಮೀಕ್ಷಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಎಲ್ಲಾ ವಾಹನ ಚಾಲಕರು ತಮ್ಮ ವಾಹನಗಳ ಮೂಲಕ ನಿಧಾನವಾಗಿ ಸಾಗಬೇಕು ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

2026ನೇ ಸಾಲಿನ ರಸ್ತೆ ಸಂಚಾರ ಸಮೀಕ್ಷೆಯು ಫೆಬ್ರವರಿ 26ರ ಬೆಳಗ್ಗೆ 6 ರಿಂದ ಫೆಬ್ರವರಿ 28ರ ಬೆಳಗ್ಗೆ 6 ಗಂಟೆಯವರೆಗೆ ಸತತವಾಗಿ 3 ದಿನಗಳ ಕಾಲ ನಡೆಯಲಿದೆ. ಇದಕ್ಕಾಗಿ ರಸ್ತೆಗಳ ಮೇಲೆ ಕ್ಯಾಮೆರಾ ಸಮೇತ ಸಮೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮೀಕ್ಷಾ ಕೇಂದ್ರಗಳಿದ್ದಲ್ಲಿ ‘ವಾಹನ ರಸ್ತೆ ಸಂಚಾರ ಸಮೀಕ್ಷೆ ಕೇಂದ್ರವಿದೆ, ತಮ್ಮ ವಾಹನಗಳನ್ನು ನಿಧಾನವಾಗಿ ಚಲಿಸಿ’ ಎಂದು ಸೂಚನಾ ಫಲಕಗಳನ್ನು ಅಳವಡಿಸಲಾಗಿರುತ್ತದೆ.

ಈ ಸಮೀಕ್ಷೆಯಿಂದ ಸಂಗ್ರಹಿಸಿದ ಮಾಹಿತಿಯಿಂದ ಸರ್ಕಾರಕ್ಕೆ ರಸ್ತೆಗಳ ಸಂಚಾರ ತೀವ್ರತೆ ಕಂಡುಹಿಡಿಯುವುದಕ್ಕೆ, ರಸ್ತೆಗಳ ಅಗಲ ಅಳತೆ ನಿರ್ಧರಿಸಲು, ರಸ್ತೆಗಳ ಮೇಲ್ದರ್ಜೆಗೇರಿಸಲು ಹಾಗೂ ರಸ್ತೆಗಳ ಸ್ಥಿತಿಗತಿ ಸುಧಾರಿಸಲು ಅನುಕೂಲವಾಗುತ್ತದೆ.

ರಸ್ತೆ ಸಂಚಾರ ಸಮೀಕ್ಷೆಯನ್ನು ಯಶಸ್ವಿಯಾಗಿಸಲು ವಾಹನ ಚಾಲಕರು ಮತ್ತು ಸಾರ್ವಜನಿಕರು ತಮ್ಮ ವಾಹನಗಳನ್ನು ನಿಧಾನವಾಗಿ ಚಲಿಸಿ ಸಹಕರಿಸುವಂತೆ ಮನವಿ ಮಾಡಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular