HomeKarnatakaBREAKING NEWS: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BREAKING NEWS: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವತಿಯರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವತಿಯರನ್ನು ಲೈಫ್ ಗಾರ್ಡ್ ಗಳು ರಕ್ಷಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬಳಿಯ ಕುಡ್ಲೆ ಬೀಚ್ ನಲ್ಲಿ ನಡೆದಿದೆ.

ಪ್ರವಾಸಕ್ಕೆಂದು ಬೆಂಗಳೂರಿನಿಂದ ಕುಡ್ಲೆ ಬೀಚ್ ಗೆ ಬಂದಿದ್ದ ಮೂವರು ಯುವತಿಯರು ಈಜಲು ಸಮುದ್ರಕ್ಕೆ ಇಳಿದಿದ್ದಾಗ ಅಲೆಗಳ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದರು, ತಕ್ಷಣ ಗಮನಿಸಿದ ಲೈಫ್ ಗಾರ್ಡ್ ಗಳು ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.

ಬೆಂಗಳೂರಿನ ಜಯನಗರದ ಸ್ಮಿತಾ ರವಿಚಂದ್ರನ್, ನಿಹಾರಿಕಾ ಗಿರಿ, ಪವಿತ್ರಾ ಸುಂದರನ್ ರಕ್ಷಿಸಲ್ಪಟ್ಟ ಯುವತಿಯರು. ಲೈಫ್ ಗಾರ್ಡ್ ಗಳಾದ ನವೀನ್ ಅಂಬಿಗ, ಮಂಜುನಾಥ್ ಎಂಬುವವರು ಯುವತಿಯರನ್ನು ರಕ್ಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular