HomeKarnatakaGOOD NEWS : ಒಂದು ವಾರದಲ್ಲಿ 3 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ :...

GOOD NEWS : ಒಂದು ವಾರದಲ್ಲಿ 3 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಳಗಾವಿ: ಒಂದು ವಾರದಲ್ಲಿ 3 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಗೃಹಲಕ್ಷ್ಮೀ ಯೋಜನೆ ಹಣ ವಿಳಂಬವಾಗಿರುವ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಇಲಕಹೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ ನೀಡಿದ್ದಾರೆ.

ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮೆ ಆಗಿಲ್ಲ ಎಂದು ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸಿರುವ ಬೆನ್ನಲ್ಲೇ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನಾನು ಆಸ್ಪತ್ರೆಗೆ ದಾಖಲಾಗಿದ್ದ ಕಾರಣ 3 ತಿಂಗಳು ಯೋಜನೆ ಹಣ ಬಿಡುಗಡೆಗೆ ವಿಳಂಬವಾಗಿದೆ. ನಾನು ಕಾರ್ಯನಿರ್ವಹಿಸುತ್ತಿದ್ದಾಗ ಹಣಕಾಸು ಇಲಾಖೆಗೆ ಒತ್ತಡ ತಂದು ಹಣ ಬಿಡುಗಡೆ ಮಾಡಿಸುತ್ತಿದ್ದೆ ಎಂದಿದ್ದಾರೆ.
ಇನ್ನೊಂದು ವಾರ 10 ದಿನಗಳಲ್ಲಿ ಗೃಹಲಕ್ಷ್ಮೀ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ. ನನಗೆ ಅಪಘಾತವಾಗಿ 40 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದೆ. ಹಾಗಾಗಿ ಗೃಹಲಕ್ಷ್ಮೀ ಯೋಜನೆಯ ಹಣ ಹಾಕುವ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ. ಇನ್ನೊಂದು ವಾರದಲ್ಲಿ ಮೂರು ತಿಂಗಳ ಹಣ ಒಟ್ಟಿಗೆ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular