ಯಾದಗಿರಿ: ರಾಜ್ಯದಲ್ಲಿ ಹೆಚ್ಚುವರಿಯಾಗಿ 600 ಎಂಬಿಬಿಎಸ್ ಸೀಟು ಹೆಚ್ಚಳ ಮತ್ತು ಮೂರು ಹೊಸ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಯಾದಗಿರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಮನಗರ, ಬಾಗಲಕೋಟೆ, ಕನಕಪುರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಆಗಸ್ಟ್ ತಿಂಗಳಲ್ಲಿ ಹುಬ್ಬಳ್ಳಿಯಲ್ಲಿ 400 ಹಾಸಿಗೆಗಳ ಸಾಮರ್ಥ್ಯದ ಜಯದೇವ ಆಸ್ಪತ್ರೆ ಉದ್ಘಾಟಿಸಲಾಗುವುದು ಎಂದು ಹೇಳಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್ ಮತ್ತು ಕ್ಯಾನ್ಸರ್ ಆಸ್ಪತ್ರೆಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

