HomeIndiaಮನೆಗೆ ಬೆಂಕಿ ತಗುಲಿ ಘೋರ ದುರಂತ: 3 ಮಹಿಳೆಯರು ಸೇರಿ 5 ಮಂದಿ ಸಾವು

ಮನೆಗೆ ಬೆಂಕಿ ತಗುಲಿ ಘೋರ ದುರಂತ: 3 ಮಹಿಳೆಯರು ಸೇರಿ 5 ಮಂದಿ ಸಾವು

ನವದೆಹಲಿ: ಪಶ್ಚಿಮ ದೆಹಲಿಯ ಪಿತಾಂಪುರ ಪ್ರದೇಶದಲ್ಲಿ ಗುರುವಾರ ರಾತ್ರಿ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ.

ಭಾರೀ ಅಗ್ನಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಇದು ವಿದ್ಯುತ್ ಸ್ಫೋಟ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಅಗ್ನಿಶಾಮಕ ಸೇವೆಗಳು(ಡಿಎಫ್‌ಎಸ್) ಮತ್ತು ದೆಹಲಿ ಪೊಲೀಸರು ಈ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಬೆಂಕಿಯ ಬಗ್ಗೆ ರಾತ್ರಿ 8.07-8.10 ರ ಸುಮಾರಿಗೆ ಕರೆ ಬಂದಿದೆ. ಪಿತಾಂಪುರದ ZP ಬ್ಲಾಕ್‌ನ ಸ್ಥಳೀಯ ನಿವಾಸಿಗಳು ಈ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ಡಿಎಫ್‌ಎಸ್ ಅವರು ಸ್ಥಳಕ್ಕೆ ತಲುಪಲು 10-15 ನಿಮಿಷಗಳನ್ನು ತೆಗೆದುಕೊಂಡರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳದಿಂದ 7 ಮಂದಿಯನ್ನು ರಕ್ಷಿಸಿ ಎಲ್ಲರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಭಾರೀ ಬೆಂಕಿಯಿಂದಾಗಿ ಮೃತರ ದೇಹಗಳು ಸುಟ್ಟು ಕರಕಲಾಗಿವೆ ಎಂದು ಡಿಎಫ್‌ಎಸ್ ತಿಳಿಸಿದೆ.

ಡಿಎಫ್‌ಎಸ್ ಮುಖ್ಯಸ್ಥ ಅತುಲ್ ಗಾರ್ಗ್, ವಾಯುವ್ಯ ಡಿಸಿಪಿ ಜಿತೇಂದ್ರ ಮೀನಾ, ಮಾಹಿತಿ ನೀಡಿ, ಐವರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular