HomeLatest Newsಪಾಲಿಕೆ ವಾಹನ ಹರಿದು 3 ವರ್ಷದ ಮಗು ಸಾವು: ಮುಗಿಲುಮುಟ್ಟಿದ ಪೋಷಕರ ಆಕ್ರಂದನ

ಪಾಲಿಕೆ ವಾಹನ ಹರಿದು 3 ವರ್ಷದ ಮಗು ಸಾವು: ಮುಗಿಲುಮುಟ್ಟಿದ ಪೋಷಕರ ಆಕ್ರಂದನ

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ ಕಸ ಸಂಗ್ರಹಿಸುವ ವಾಹನ ಹರಿದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಬಳ್ಳಾರಿಯ ಬಾಪೂಜಿನಗರದಲ್ಲಿ ನಡೆದಿದೆ.

ಶೈಲಜಾ, ಸಮರ ದಂಪತಿಯ ಪುತ್ರ ವಿಕ್ಕಿ(3) ಮೃತಪಟ್ಟ ಮಗು. ಬೆಳಿಗ್ಗೆ ಬಾಪೂಜಿನಗರದಲ್ಲಿ ಕಸ ಸಂಗ್ರಹಿಸಲು ಪಾಲಿಕೆ ವಾಹನ ಬಂದಿದ್ದು, ರಸ್ತೆ ಬದಿ ಆಟವಾಡುತ್ತಿದ್ದ ವಿಕ್ಕಿಯ ತಲೆ ಮೇಲೆ ಹರಿದಿದೆ. ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆಗೆ ತಲುಪುವ ವೇಳೆಗಾಗಲೇ ಮಗು ಮೃತಪಟ್ಟಿದೆ.

ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಪಾಲಿಕೆ ಮೇಯರ್ ನಂದೀಶ್, ಬಳ್ಳಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ವಾಹನ ಚಾಲಕನ ಅತಿ ವೇಗದ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ಆರೋಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular