HomeCrimeಬೆಚ್ಚಿಬೀಳಿಸುವ ಕೃತ್ಯ; 3 ವರ್ಷದ ಬಾಲಕಿ ಮೇಲೆ 1ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ

ಬೆಚ್ಚಿಬೀಳಿಸುವ ಕೃತ್ಯ; 3 ವರ್ಷದ ಬಾಲಕಿ ಮೇಲೆ 1ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ

1 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರೋ ಆಘಾತಕಾರಿ ಘಟನೆ ಉತ್ತರಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕಿಯ ಕುಟುಂಬಸ್ಥರು ನೀಡಿದ ದೂರನ್ನು ಉಲ್ಲೇಖಿಸಿ, ಶನಿವಾರ ಬಾಲಕಿಯನ್ನು ಶಾಲೆಯ ಮೇಲ್ಛಾವಣಿಗೆ ಕರೆದೊಯ್ದು ಬಾಲಕ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕ 1 ನೇ ತರಗತಿಯ ವಿದ್ಯಾರ್ಥಿಯಾಗಿದ್ದರೆ, ಬಾಲಕಿ ನರ್ಸರಿ ವಿದ್ಯಾರ್ಥಿನಿಯಾಗಿದ್ದಾಳೆ.

For Latest News Updates, Join Our Whatsapp Community🚩
RELATED ARTICLES

Most Popular